ಶ್ರೀಲಂಕಾ ನೂತನ ಅಧ್ಯಕ್ಷರಾಗಿ ಸಿಂಘೆ ಆಯ್ಕೆ

ಕೊಲೊಂಬೋ,ಜು.೨೦- ಆರ್ಥಿಕ ಬಿಕ್ಕಟ್ಟಿನಿಂದ ನಲುಗಿರುವ ಮಧ್ಯೆ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ರನಿಲ್ ವಿಕ್ರಮ ಸಿಂಘೆ ಆಯ್ಕೆಯಾಗಿದ್ದಾರೆ.
ಗೋತಬಯ ರಾಜಪಕ್ಸೆ ರಾಜೀನಾಮೆಯಿಂದ ತೆರವಾಗಿರುವ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷರ ಅವಧಿ ಮುಗಿಯುವ ತನಕ ಉತ್ತರಾಧಿಕಾರಿ ಆಯ್ಕೆಗೆ ನಡೆದ ಮತದಾನದಲ್ಲಿ ಇಬ್ಬರು ಪ್ರತಿಸ್ಪರ್ಧಿಗಳನ್ನು ಪಕ್ಕಕ್ಕಿಟ್ಟು ರನಿಲ್ ವಿಲ್ರಮ ಸಿಂಘೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ವಿರೋಧ ಪಕ್ಷದ ನಾಯಕ ಮತ್ತು ಸಮಗಿ ಜನ ಬಲವೇಗಯ ಅಭ್ಯರ್ಥಿ ಸಜಿತ್ ಪ್ರೇಮದಾಸ , ಅಧ್ಯಕ್ಷೀಯ ಸ್ಪರ್ಧೆಯಿಂದ ಹಿಂದೆ ಸರಿದು ಅಲಹಪ್ಪೆರುಮ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದರು. ಇದರಿಂದಾಗಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಮತ್ತು ಎಡಪಕ್ಷ ಜನತಾ ವಿಮುಕ್ತಿ ಪೆರಮುನ ಯ ಅನುರ ಕುಮಾರ ಡಿಸಾನಾಯಕೆ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ರನಿಲ್ ವಿಕ್ರಮ ಸಿಂಘೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅಧಿಕೃತ ಫಲಿತಾಂಶಗಳ ಪ್ರಕಾರ ರನಿಲ್ ವಿಕ್ರಮಸಿಂಘೆ ೧೩೪ ಮತಗಳನ್ನು ಪಡೆದು ವಿಜಯಿಯಾಗಿದ್ದಾರೆ. ಎದುರಾಳಿ ಡಲ್ಲಾಸ್ ಅಲಹಪ್ಪೆರುಮ ೮೨ ಮತ್ತು ಎಡಪಂಥೀಯ ಅನುರ ಡಿಸ್ಸಾನಾಯಕೆ ಅವರಿಗೆ ಮೊದಲ ಪ್ರಾಶಸ್ತ್ಯದ ಮೇಲೆ ಸಂಪೂರ್ಣ ಬಹುಮತವನ್ನು ನೀಡಿದರು.
೭೩ ವರ್ಷದ ವಿಕ್ರಮಸಿಂಘೆ ಅವರು ಆಡಳಿತಾರೂಢ ಶ್ರೀಲಂಕಾ ಪೊದುಜನ ಪೆರಮುನ ಬೆಂಬಲ ಪಡೆದು ಆಯ್ಕೆಯಾಗಿದ್ದಾರಡ. ಆರು ಬಾರಿ ಮಾಜಿ ಪ್ರಧಾನಿಯಾಗಿದ್ದ ರನಿಲ್ ವಿಕ್ರಮಸಿಂಘೆ ಅವರು ಗೊಟಬಯ ರಾಜಪಕ್ಸೆ ರಾಜೀನಾಮೆ ನೀಡಿ ಬಿಕ್ಕಟ್ಟಿನ ಪೀಡಿತ ರಾಷ್ಟ್ರದಿಂದ ಪಲಾಯನ ಮಾಡಿದ ನಂತರ ಹಂಗಾಮಿ ಅಧ್ಯಕ್ಷರಾಗಿದ್ದರು

ಕಠಿಣ ಪರಿಸ್ಥಿತಿಯಲ್ಲಿ ದೇಶ
ದೇಶ ಆರ್ಥಿಕ ಬಿಕ್ಕಟ್ಟಿನ್ನು ಅತ್ಯಂತ ಕಠಿಣ ಪರಿಸ್ಥಿತಿಯ ಅತಿ ಮುಂದೆ ದೊಡ್ಡ ಸವಾಲುಗಳು ನಮ್ಮ ಮುಂದೆ ಇವೆ ಎಂದು ಶ್ರೀಲಂಕಾದ ನೂತನ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಹೇಳಿದ್ದಾರೆ.
ದೇಶ ಸಂಕಷ್ಟದ ಪರಿಸ್ಥಿತಿಯಿಂದ ಹೊರಬರಲು ಎಲ್ಲರ ಸಹಕಾರ ಅಗತ್ಯ ಎಂದು ಅವರು ಮನವಿ ಮಾಡಿದ್ದಾರೆ.