ಶ್ರೀವಾಣಿ ಕಾಲೇಜಿಗೆ ಉತ್ತಮ ಪಲಿತಾಂಶ

ಆನೇಕಲ್.ಏ೨೫:೨೦೨೩ರ ದ್ವಿತೀಯ ಪಿಯುಸಿ ಪಲಿತಾಂಶ ಪ್ರಕಟವಾಗಿದ್ದು ಆನೇಕಲ್ ಪಟ್ಟಣಕ್ಕೆ ಸಮೀಪವಿರುವ ದಿನ್ನೂರು ಗ್ರಾಮದ ಬಳಿಯಿರುವ ಶ್ರೀವಾಣಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ತೇಜಸ್ವಿನಿ ಎಂಬ ವಿದ್ಯಾರ್ಥಿ ಹಾಗೂ ವಿಜ್ಞಾನ ವಿಭಾಗದಲ್ಲಿ ಪಾವನಿ ಎಂಬ ವಿದ್ಯಾರ್ಥಿಯು (೯೬.೩೩) ಅತಿ ಹೆಚ್ಚು ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದು ಕೊಟ್ಟಿದ್ದಾಳೆ. ಈ ವೇಳೆ ಶ್ರೀವಾಣಿ ಕಾಲೇಜಿನ ಆಡಳಿತ ಮಂಡಳಿಯವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಗೌರವ ಪೂರ್ವಕವಾಗಿ ಅಬಿನಂದನೆ ಸಲ್ಲಿಸಿದರು.
ಈ ವೇಳೆ ಶ್ರೀವಾಣಿ ಕಾಲೇಜಿನ ಪ್ರಾಂಶುಪಾಲರಾದ ತಿಮ್ಮಾರೆಡ್ಡಿ ಮತ್ತು ಸಂಸ್ಥಾಪಕರದ ಚಂದ್ರಶೇಖರ್ ರವರು ಮಾತನಾಡಿ ಶ್ರೀವಾಣಿ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಹೆಸರು ತಂದುಕೊಟ್ಟಿದ್ದಾರೆ ಎಂದರು. ನಮ್ಮ ಒಂದು ಕಾಲೇಜಿನಲ್ಲಿ ಶೇ ೯೦ ರಷ್ಠು ವಿದ್ಯಾರ್ಥಿಗಳು ಗ್ರಾಮೀಣ ಬಾಗದ ವಿದ್ಯಾರ್ಥಿಗಳೇ ಆಗಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಸಮಾಜಕ್ಕೆ ಉತ್ತಮವಾದ ಪ್ರಜೆಗಳನ್ನು ಮಾಡುವುದೇ ನಮ್ಮ ಶ್ರೀವಾಣಿ ಕಾಲೇಜಿನ ಮುಖ್ಯ ಗುರಿಯಾಗಿದೆ ಎಂದು ಹೇಳಿದರು, ಇನ್ನು ಕಾರ್ಯಕ್ರಮದಲ್ಲಿ ಶ್ರೀವಾಣಿ ಕಾಲೇಜಿನ ಆಡಳಿತ ಮಂಡಳಿಯವರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.