ಶ್ರೀ ಅಯ್ಯಾಳಲಿಂಗೇಶ್ವರ ಜಾತ್ರಾ ಮಹೋತ್ಸವ

ರಾಯಚೂರು,ಆ.೨೯-
ರಾಯಚೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಡವಾಟಿಯಲ್ಲಿ ಶ್ರೀ ಅಯ್ಯಾಳಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿಯಾದ ಮೊಹಮ್ಮದ್ ಶಾಲಂ ಅವರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಆಶೀರ್ವಾದ ಪಡೆದರು.
ಶ್ರಾವಣ ಮಾಸದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಶ್ರೀ ಅಯ್ಯಾಳಲಿಂಗೇಶ್ವರ ಜಾತ್ರಾ ಮಹೋತ್ಸವ ನಡೆಯಿತು. ಸರ್ವಜನಾಂಗದ ಸಮ್ಮಿಲನದಂತೆ ಎಲ್ಲ ಜಾತಿ, ಧರ್ಮ ದ ಜನರು ಸೇರಿ ಈ ಜಾತ್ರೆಯನ್ನು ಆಚರಿಸುತ್ತಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು ನಗರಸಭೆ ಸದಸ್ಯರಾದ ಜಿಂದಪ್ಪ, ಬಿ ರಮೇಶ್, ತಿಮ್ಮರೆಡ್ಡಿ, ಕುರಬದೊಡ್ಡಿ ಆಂಜನೇಯ್ಯ, ಮಹಾದೇವ, ಮಹೇಂದ್ರ ಜೆ. ಮಲ್ಲಾಪೂ, ಎಸ್ ಎಸ್ ಹಿರೇಮಠ ಸೇರಿದಂತೆ ಅನೇಕರು ಭಾಗವಹಿಸಿದ್ದರು.