ಶ್ರೀ ಕರಿಬಸವೇಶ್ವರ ಶಾಲೆಯ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

ಕಲಬುರಗಿ :ಜು.29: ನಗರದ ಎನ್. ವಿ. ಮೈದಾನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯೆ ವತಿಯಿಂದ ಹಮ್ಮಿಕೊಂಡಿದ್ದ ಪ್ರಾಥಮಿಕ ವಿಭಾಗದ ದಕ್ಷಿಣ ವಲಯದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಹೊನ್ನ ಕಿರಣಗಿ ಗ್ರಾಮದಲ್ಲಿರುವ
ಶ್ರೀ ಕರಿಬಸವೇಶ್ವರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಜಯಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
400 ಮೀಟರ್ ಓಟದಲ್ಲಿ ಸುಧಾ ತಂದೆ ಸಂಜಯ್ ಕುಮಾರ್ ಪ್ರಥಮ ಸ್ಥಾನ ಹಾಗೂ ಅನುಪ್ರಿಯಾ ತಂದೆ ರಾಜಶೇಖರ್ ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶ್ರೀ ರಾಚೋಟೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಷ.ಬ್ರ. ಚಂದ್ರಗುಂಡ ಶಿವಾಚಾರ್ಯರು, ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ವಿಜೇತರಿಗೆ ಅಭಿನಂದಿಸಿದರು.