
ರಾಯಚೂರು,ಆ.೨೪-
ಸೆ.೬ರಂದು ಶ್ರೀ ಕೃಷ್ಣ ಜಯಂತಿಯನ್ನು ಅಚ್ಚುಕಟ್ಟಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶ್ರೀ ಕೃಷ್ಣ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿಯನ್ನು ಸೆ.೬ರಂದು ಆಚರಿಸಲಾಗುತ್ತಿದ್ದು, ಇದಕ್ಕೆ ಸಮಾಜದವರ ಸಹಕಾರ ಅಗತ್ಯವಾಗಿದ್ದು, ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಮತ್ತು ದೇಶದ ಸಂಸ್ಕೃತಿ ಮತ್ತು ಆಚಾರ ವಿಚಾರಗಳನ್ನು ಅಳವಡಿಸುವ ಮೂಲಕ ಆಚರಣೆ ಮಾಡಬೇಕು ಎಂದು ತಿಳಿಸಿದರು.
ಶ್ರೀ ಕೃಷ್ಣ ಜಯಂತಿಯಂಗವಾಗಿ ಸೆ.೬ರಂದು ಬೆಳಿಗ್ಗೆ ೯ ಗಂಟೆಗೆ ಮೆರವಣಿಗೆ ಆರಂಭಿಸಬೇಕು ಮತ್ತು ಮೆರವಣಿಗೆ ಹಾದಿಯನ್ನು ಆದಷ್ಟು ಹತ್ತಿರವಾಗಿರುವಂತೆ ನೋಡಿಕೊಳ್ಳಬೇಕು ಮತ್ತು ಮೆರವಣಿಗೆಯಲ್ಲಿ ಕಲೆ, ಸಂಸ್ಕೃತಿಗೆ ಸಂಬಂಧಿಸಿದ ತಂಡಗಳನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು.
ಬೆಳಿಗ್ಗೆ ೧೧ ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಬೇಕು ಮತ್ತು ಶಿಷ್ಟಾಚಾರದಂತೆ ಕಾರ್ಯಕ್ರಮವನ್ನು ಏರ್ಪಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಸಮಾಜದ ಮುಖಂಡರಾದ ಕೆ.ಹನುಮಂತಪ್ಪ, ನಾಗೇಶ ಯಾದವ್, ಭೀಮಣ್ಣ ಯಾದವ್, ಗುರುಸ್ವಾಮಿ, ಹರೀಶ ನಾಡಗೌಡ, ದಾಸಪ್ಪ, ಈರಣ್ಣ, ವೆಂಕಟೇಶ ಯಾದವ್, ಗೋವಿಂದಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.