ಶ್ರೀ ಕೃಷ್ಣ ದೇವರಾಯನ ಪುತ್ಥಳಿ ನಿರ್ಮಿಸಿ

ಗಂಗಾವತಿ ನ 01 : ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಮುಂಭಾಗದಲ್ಲಿರುವ ಶ್ರೀ ಕೃಷ್ಣ ದೇವರಾಯ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ದಿನಾರಣೆ ಕಾರ್ಯಕ್ರಮವನ್ನು ಶಾಸಕ ಪರಣ್ಣ ಮುನವಳ್ಳಿ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಈ ವೇಳೆ ಕರವೇ ಕೊಪ್ಪಳ ಜಿಲ್ಲಾಧ್ಯಕ್ಷ ಶ್ರೀ ಕೃಷ್ಣ ದೇವರಾಯನ ಪುತ್ಥಳಿ ನಿರ್ಮಿಸಬೇಕು ಎಂದು ಮನವಿ ಪತ್ರ ಸಲ್ಲಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಪರಣ್ಣ ಮುನವಳ್ಳಿ, ಕೋವಿಡ್-19 ಹಿನ್ನೆಲೆ ರಾಜ್ಯದಲ್ಲಿ ಆರ್ಥಿಕ ಸಂಕಷ್ಟು ಇದೆ. ಶಾಸಕರ ಅನುದಾನ ಅಥವಾ ನಗರಸಭೆ ಅನುದಾನದಲ್ಲಿ ಮುಂದಿನ ದಿನಮಾನಗಳಲ್ಲಿ ಶ್ರೀಕೃಷ್ಣ ದೇವರಾಯನ ಪುತ್ಥಳಿ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.
ತಾಲೂಕು ಪಂಚಾಯಿತಿ ಅಧ್ಯಕ್ಷ ಮಹ್ಮದ್ ರಫೀ, ತಾಪಂ ಉಪಾಧ್ಯಕ್ಷ ರೇಣುಕಾ, ಬಿಜೆಪಿ ರೈತ ಮುಖಂಡ ತಿಪ್ಪೇರುದ್ರಸ್ವಾಮಿ ಇತರರು ಮಾತನಾಡಿದರು. ಆಟೋಗಳನ್ನು ಕನ್ನಡ ಬಾವುಟಗಳಿಂದ ಅಲಂಕಾರ ಮಾಡಿದ್ದು ನೋಡುಗರ ಗಮನ ಸೆಳೆಯಿತು.
ಕರವೇ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ, ತಾಲೂಕು ಅಧ್ಯಕ್ಷ ಖಾಜಾವಲಿ. ನಗರ ಆಟೋ ಚಾಲಕ ಘಟಕದ ಅಧ್ಯಕ್ಷ ಹುಸೇನ ಸಾಬ್, ಶಂಕರ ಪೂಜಾರ್, ಸಿದ್ದು ನಾಯಕ, ಹುಲಗಪ್ಪ ಹಾಗೂ ಪದಾಧಿಕಾರಿಗಳು ಇದ್ದರು.

ಮಾಸ್ಕ ವಿತರಣೆ
ನಗರದ ಕೊಪ್ಪಳ ರಸ್ತೆಯಲ್ಲಿರುವ ತಾಯಿ ಭುವನೇಶ್ವರಿ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಪೌರ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಯಿತು.