ವಿಜಯಪುರ:ಜೂ.18: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಇದೇ ಜೂನ್ 27 ರಂದು ಶ್ರೀ ಕೆಂಪೇಗೌಡ ಜಯಂತಿಯನ್ನು ಹಾಗೂ ಜುಲೈ 03 ರಂದು ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜರುಗಿದ ಪೂರ್ವಸಿದ್ಧತಾ ಸಭೆಯಲ್ಲಿ ಜೂನ್ 27 ರಂದು ಶ್ರೀ ಕೆಂಪೇಗೌಡ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ಭಾವಚಿತ್ರ ಮೆರವಣಿಗೆಗೆ ಚಾಲನೆ ಹಾಗೂ 10-30ಕ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಈ ಕಾರ್ಯಕ್ರಮಕ್ಕೆ ಸಂಕೇತಗೌಡ ಬ್ಯಾಕೋಡ ಅವರಿಂದ ಉಪನ್ಯಾಸ ಕಾರ್ಯಕ್ರಮ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.
ಜುಲೈ 03 ರಂದು ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಿಂದ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಕಲಾ ತಂಡದೊಂದಿಗೆ ಭಾವಚಿತ್ರ ಮೆರವಣಿಗೆ 10-30ಕ್ಕೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಜಯಂತಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಹಡಪದ ಅಪ್ಪಣ್ಣ ಅವರ ಕುರಿತ ತತ್ವಗಳು, ಆದರ್ಶಗಳ ಕುರಿತು ವಿಶೇಷ ಉಪನ್ಯಾಸಕರನ್ನು ಆಹ್ವಾನಿಸಲು ನಿರ್ಧರಿಸಲಾಯಿತು. ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಹಾಗೂ ಯಾವುದೇ ಲೋಪವಾಗದಂತೆ ಆಹ್ವಾನ ಪತ್ರಿಕೆ, ವೇದಿಕೆ ಅಲಂಕಾರ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಶಿಷ್ಠಾಚಾರದಂತೆ ಕಾರ್ಯಕ್ರಮ ಆಯೋಜಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಮಹಾನಗರ ಉಪಆಯುಕ್ತ ಮಹಾವೀರ ಬೋರಣ್ಣನವರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್, ಸಿಪಿಐ ವಿಜಯ ಬಿ. ಮಠಪತಿ, ದಶರಥ ನಾವಿ, ರವಿಕಾಂತ ಬಿರಾದಾರ, ಭೀಮರಾಯ ಜಿಗಜಿಣಗಿ, ಗಿರೀಶ ಕುಲಕರ್ಣಿ, ಸೋಮನಗೌಡ ಕಲ್ಲೂರ ಸೇರಿದಂತೆ ಅಧಿಕಾರಿಗಳು, ಸಮಾಜದ ಮುಖಂಡರು ಉಪಸ್ಥಿತರಿದ್ದರು.