ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯ ಶ್ಲ್ಯಾಘನೀಯ: ಸಚಿವ ಶೆಟ್ಟರ್

ಧಾರವಾಡ,ನ9- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ,ಕುಂದಗೋಳ, ಕಲಘಟಗಿ, ಹಾಗೂ ಧಾರವಾಡ ತಾಲೂಕಿನ ವಿದ್ಯಾರ್ಥಿಗಳಿಗೆ ಟ್ಯಾಬ್ ಮತ್ತು ಲ್ಯಾಪ್ ಟಾಪ್ ಉದ್ಘಾಟನಾ ಕಾರ್ಯಕ್ರಮವನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ ಅವರು ಉದ್ಘಾಟಿಸಿ ಮಾತನಾಡುತ್ತಾ ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಟ್ಯಾಬ್ ಮತ್ತು ಲ್ಯಾಪ್ ಟಾಪ್ ಉದ್ಘಾಟನೆಯನ್ನು ಧರ್ಮಸ್ಥಳದಲ್ಲಿ ಏಕ ಕಾಲದಲ್ಲಿ ಮಾಡಲಾಗುತ್ತಿದ್ದು ಧರ್ಮಸ್ಥಳದ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.
ಸರ್ಕಾರ ಮಾಡುವಂಥ ಕೆಲಸವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಅವರು ಮಾಡುತ್ತಿದ್ದಾರೆ ಎಂದು ತಿಳಿಸಿದ್ದು,ಸಾಮಾಜಿಕ ಪರಿವರ್ತನೆಯಲ್ಲಿ ಧರ್ಮಾಧಿಕಾರಿಗಳ ಕಾರ್ಯ ಮೌನ ಕ್ರಾಂತಿ ಆಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ (ರಿ) ಧಾರವಾಡ ಪ್ರಾದೇಶಿಕ ವ್ಯಾಪ್ತಿಯ ನಿರ್ದೇಶಕರಾದ ದುಗ್ಗೇಗೌಡಾ ಇವರು ಕಾರ್ಯಕ್ರಮದ ಧ್ಯಯದ್ದುದೇಶ ಕುರಿತು ಮಾಹಿತಿ ನೀಡಿದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜಣ್ಣ ಕೊರವಿ, ವಿಶ್ವಮಾನ್ಯ ಪ್ರಶಸ್ತಿ ಪುರಸ್ಕೃತ ಸಂತೋಷ್ ಆರ್ ಶೆಟ್ಟಿ, ಪಿರಾಜಿ ಖಂಡೇಕರ್, ಜನಜಾಗ್ರತಿ ಸದಸ್ಯರು ಭಾಗವಹಿಸಿದ್ದರು.
ಕಾರ್ಯಕ್ರಮಕ್ಕೆ ಸ್ವಾಗತವನ್ನು ಧಾರವಾಡ ಜಿಲ್ಲೆಯ ನಿರ್ದೇಶಕರರಾದ ಸುರೇಶ ಎಂ ಸ್ವಾಗತಿಸಿದರು,ಉಲ್ಲಾಸ್ ಮೇಸ್ತ ನಿರೂಪಿಸಿದರು ಹಾಗೂ ಮಂಜುನಾಥ ವಂದಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.