ಶ್ರೀ ಜಗದ್ಗುರು ರೇಣುಕಾಚಾರ್ಯರ ಚಿಂತನೆಗಳು ಜೀವನ ಶ್ರೇಯಸ್ಸಿಗೆ ಸೋಪಾನ

ಬಾಳೆಹೊನ್ನೂರು. ಮಾ.6; ಸಕಲರಿಗೂ ಒಳಿತನ್ನೇ ಬಯಸಿದ ವೀರಶೈವ ಧರ್ಮ ಅತ್ಯಂತ ಪ್ರಾಚೀನವಾದುದು. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ಚಿಂತನೆಗಳು ಜೀವನ ಶ್ರೇಯಸ್ಸಿಗೆ ಸೋಪಾನವಾಗಿವೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನದ ಅಂಗವಾಗಿ ಜರುಗಿದ ಶಿವಾದ್ವೆöÊತ ಧರ್ಮ ಸಮ್ಮೇಳನದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಜಾತಿ ಜಂಜಡಗಳನ್ನು ದೂರ ಮಾಡಿ ಶಿವಜ್ಞಾನದ ಮೂಲಕ ಜೀವ ಶಿವನಾಗುವ ಅಂಗ ಲಿಂಗವಾಗುವ ಪರಮ ರಹಸ್ಯವನ್ನು ಬೋಧಿಸಿದ ಕೀರ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ. ಗಂಡು ಹೆಣ್ಣು ಬಡವ ಶ್ರೀಮಂತ ಮತ್ತು ಉಚ್ಛ ನೀಚ ತಾರತಮ್ಯ ನಿವಾರಿಸಿ ಷಟ್ಸ÷್ಥಲ ಸಾಧನೆಯ ಮೂಲಕ ಉದಾತ್ತ ಭಾವನೆಗಳನ್ನು ಜಾಗೃತಗೊಳಿಸಿದ್ದನ್ನು ಮರೆಯಲಾಗದು. ಜಾತಿಗಿಂತ ನೀತಿ ತತ್ವಕ್ಕಿಂತ ಆಚರಣೆ, ಮಾತಿಗಿಂತ ಕೃತಿ ಬೋಧನೆಗಿಂತ ಸಾಧನೆ ದಾನಕ್ಕಿಂತ ದಾಸೋಹ ಚರಿತ್ರೆಗಿಂತ ಚಾರಿತ್ರö್ಯ ಬಹು ದೊಡ್ಡದೆಂದು ಸಾರಿದ ಅವರ ದೂರದೃಷ್ಟಿ ಮತ್ತು ವಿಶ್ವ ಬಂಧುತ್ವದ ವಿಚಾರ ಧಾರೆಗಳು ಅಂದಿಗಷ್ಟೇ ಅಲ್ಲ ಸರ್ವ ಕಾಲಕ್ಕೂ ಸಕಲ ಸಮುದಾಯಕ್ಕೂ ಅನ್ವಯಗೊಳ್ಳುತ್ತವೆ. ಅಹಿಂಸಾದಿ ಧ್ಯಾನ ಪರ್ಯಂತರವಾದ ದಶ ಧರ್ಮ ಸೂತ್ರಗಳ ಪರಿಪಾಲನೆಯಿಂದ ಜೀವನದಲ್ಲಿ ಸರ್ವೋನ್ನತಿ ಪಡೆಯಲು ಸಾಧ್ಯವೆಂದು ಬೋಧಿಸಿದ್ದನ್ನು ಎಂದಿಗೂ ಮರೆಯಲಾಗದೆಂದರು. ಇಂದು ನಾಡಿನೆಲ್ಲೆಡೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸರ್ಕಾರದಿಂದ ಆಚರಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ. ಇಂದಿನ ಸಮಾರಂಭದಲ್ಲಿ ಮಾನ್ಯ ಮುಖ್ಯ ಮಂತ್ರಿಗಳು ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿದ್ದು ಹಾಗೂ ಬಿ.ಎಸ್.ಯಡಿಯೂರಪ್ಪನವರಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಿರುವುದು ತಮಗೆ ಸಂತೋಷ ತಂದಿದೆ. ಇಂದು ನಾಡಿನೆಲ್ಲೆಡೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಸರ್ಕಾರದ ವತಿಯಿಂದ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.