ಶ್ರೀ ಜಗದ್ಗುರು ರೇಣುಕಾಚಾರ್ಯರ ವಿಚಾರ ಧಾರೆ ಸರ್ವರಿಗೂ ದಾರಿದೀಪ; ರಂಭಾಪುರಿ ಶ್ರೀ

ಸಂಜೆವಾಣಿ ವಾರ್ತೆ

ಕಡೇನಂದಿಹಳ್ಳಿ-ಫೆ.೧೪: ಜ್ಞಾನ ಕ್ರಿಯಾತ್ಮಕವಾದ ಧರ್ಮ ಪಾಲನೆಯಿಂದ ಜಗದಲ್ಲಿ ಶಾಂತಿ ನೆಲೆಸಲು ಸಾಧ್ಯ. ಅಂತರAಗ ಮತ್ತು ಬಹಿರಂಗ ಪರಿಶುದ್ಧಗೊಳಿಸುವ ಶಕ್ತಿ ಶ್ರೀ ಗುರುವಿಗೆ ಇದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ ವಿಚಾರ ಧಾರೆ ಸರ್ವರಿಗೂ ದಾರಿದೀಪ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು  ಶಿಕಾರಿಪುರ ತಾಲೂಕ ಕಡೇನಂದಿಹಳ್ಳಿ ಕ್ಷೇತ್ರದ ಶ್ರೀ ಗುರು ರೇವಣಸಿದ್ಧೇಶ್ವರ ಪುಣ್ಯಾಶ್ರಮದಲ್ಲಿ ಜರುಗಿದ 36 ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯರ ಪುತ್ಥಳಿ ಅನಾವರಣ ಮಹಾಮಸ್ತಕಾಭಿಷೇಕ ಪುಷ್ಪಾರ್ಚನೆ ನೆರವೇರಿಸಿದ ನಂತರ ಜರುಗಿದ ಧರ್ಮ ಸಂಸ್ಕೃತಿ ಪುನಶ್ಚೇತನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.ಸಂಸ್ಕಾರ ಸಂಸ್ಕೃತಿಗಳ ಮೂಲಕ ಅಂಗ ಅವಗುಣಗಳನ್ನು ದೂರ ಮಾಡಿ ಲಿಂಗ ಗುಣ ಬೆಳೆಸಲು ಶ್ರಮಿಸಿದವರು ರೇಣುಕಾಚಾರ್ಯರು. ಜೀವಾತ್ಮ ಪರಮಾತ್ಮನಾಗುವ ಅಂಗ ಲಿಂಗವಾಗುವ ಭವಿ ಭಕ್ತನಾಗುವ ಸಾಧನಾ ಮಾರ್ಗವನ್ನು ಬೋಧಿಸಿ ಜೀವನ ಉತ್ಕರ್ಷತೆಗೆ ಕಾರಣರಾದವರು ರೇಣುಕಾಚಾರ್ಯರು. ಗಂಡು ಹೆಣ್ಣು ಉಚ್ಛ ನೀಚ ಮತ್ತು ಬಡವ ಬಲ್ಲಿದ ಎನ್ನದೇ ಎಲ್ಲರ ಶ್ರೇಯಸ್ಸಿಗಾಗಿ ಶ್ರಮಿಸಿದ್ದನ್ನು ಮರೆಯಲಾಗದು. ಭೌತಿಕ ಬದುಕಿಗೆ ಸಂಪತ್ತಷ್ಟೇ ಮುಖ್ಯವಲ್ಲ. ಅದರೊಂದಿಗೆ ಶಿವಜ್ಞಾನದ ಅರಿವು ಮೂಡಿಸುವುದು ಮುಖ್ಯವೆಂದು ಆರೋಗ್ಯ ಪೂರ್ಣ ಸಮಾಜಕ್ಕೆ ಶ್ರಮಿಸಿದ ಕೀರ್ತಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಸಲ್ಲುತ್ತದೆ. ಇಂಥ ಭವ್ಯ ಸುಂದರ ಶ್ರೀ ಜಗದ್ಗುರು ರೇಣುಕಾಚಾರ್ಯರ ಪುತ್ಥಳಿ ನಿರ್ಮಿಸಿ ಲೋಕಾರ್ಪಣೆಗೈದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾಡಿದ ಸತ್ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆಂದು ಹರುಷ ವ್ಯಕ್ತಪಡಿಸಿ ಶ್ರೀಗಳವರಿಗೆ ‘”ಶಿವ ಪೂಜಾ ತಪೋರತ್ನ” ಪ್ರಶಸ್ತಿ ಚಿನ್ನದುಂಗುರ ಮತ್ತು ರೇಶ್ಮೆ ಮಡಿ ಹೊದಿಸಿ ಫಲ ಪುಷ್ಪವಿತ್ತು ಜಗದ್ಗುರುಗಳು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ “ಶ್ರೀ ರಂಭಾಪುರಿ ಜಗದ್ಗುರು ರೇವಣಸಿದ್ಧೇಶ್ವರ ರಾಷ್ಟಿçÃಯ ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು. ಪ್ರಶಸ್ತಿ ಸ್ವೀಕರಿಸಿದ ಬಿ.ವೈ.ರಾಘವೇಂದ್ರ ಕೃತಜ್ಞತಾ ಪೂರ್ವಕ ಮಾತುಗಳನ್ನಾಡಿದರು. ಕಾರ್ಕಳದ ಶಿಲ್ಪಿ ಕೃಷ್ಣಾ ಆಚಾರ್ಯ, ಶಿವಮೊಗ್ಗ ಶಿಲ್ಪಿ ಜೀವನ್ ಕಲಾಸನ್ನಿಧಿ, ಶಿಕಾರಿಪುರ ಪ್ರಥಮ ದರ್ಜೆ ಗುತ್ತಿಗೆದಾರ ದೇವೇಂದ್ರಪ್ಪ ಇವರಿಗೆ ಪ್ರಶಸ್ತಿ ಮತ್ತು ಗುರುರಕ್ಷೆಯಿತ್ತು ಶ್ರೀ ರಂಭಾಪುರಿ ಜಗದ್ಗುರುಗಳು ಶುಭ ಹಾರೈಸಿದರು.