ಶ್ರೀ ದಾಸಿಮಯ್ಯ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ

ದೇವರ ದಾಸಿಮಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ
ರಾಯಚೂರು,ಮಾ.೧೬- ಮಾ.೨೬ರಂದು ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಣೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ರವೀಂದ್ರ ಕರಲಿಂಗಣ್ಣವರ ಅವರು ಹೇಳಿದರು.
ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದೇವರ ಶ್ರೀ ದಾಸಿಮಯ್ಯ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೇವರ ದಾಸಿಮಯ್ಯ ಅವರ ಜಯಂತಿಯನ್ನು ಮಾ.೧೫ರಂದು ಜಿಲ್ಲಾಡಳಿತದ ವತಿಯಿಂದ ಹಾಗೂ ಸಮಾಜದ ಸಹಯೋಗದೊಂದಿಗೆ ಆಚರಣೆ ಮಾಡಲಾಗುವುದು ಈ ಹಿನ್ನೆಲೆ ಅಂದು ಬೆಳಿಗ್ಗೆ ೧೦:೦೦ ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ನಗರದ ಕನ್ನಡ ಭವನದವರೆಗೆ ದೇವರ ದಾಸಿಮಯ್ಯ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಗುವುದು.
ನಂತರ ನಗರದ ಕನ್ನಡ ಭವನದಲ್ಲಿ ಬೆಳಿಗ್ಗೆ ೧೧:೦೦ ಗಂಟೆಗೆ ವೇದಿಕೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಚುನಾವಣೆ ಸಮೀಪಿಸುತ್ತಿರುವುದರಿಂದ ಯಾವುದೇ ಅಹಿತಕರ ಘಟನೆ ಜರುಗದಂತೆ ಹಾಗೂ ನಿಯಮ ಉಲ್ಲಂಘನೆಯಾಗದಂತೆ ಜಯಂತಿ ಆಚರಣೆ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಗುರುಲಿಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ರಾಯಚೂರು ತಹಶೀಲ್ ಕಚೇರಿಯ ಶಿರಸ್ತೆದಾರ ಪುಷ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಪರಶುರಾಮ, ಸಮಾಜದ ಮುಖಂಡರಾದ ನಾಗರಾಜ, ಗೋವಿಂದರಾಜು, ವೆಂಕಟೇಶ, ಮುನಿಚಂದ್ರ, ನಾರಾಯಣ, ನಾಗೇಶ, ಮಲ್ಲಿಕಾರ್ಜುನ, ಮೇಘರಾಜ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.