ಶ್ರೀ ದುರ್ಗಾದೇವಿ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

CamScanner 11-06-2020 17.45.49

ಗಂಗಾವತಿ ನ 07 : ತಾಲೂಕಿನ ಆನೆಗೊಂದಿ ಸಮೀಪದ ಮೇಗೋಟ ವಾಲೀಕಿಲ್ಲಾ ಶ್ರೀ ದುರ್ಗಾದೇವಿ ದೇವಸ್ಥಾನ ಸುತ್ತಮುತ್ತ ಚಿರತೆಗಳ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ ಎಂದು ತಹಸೀಲ್ದಾರ್ ಎಂ.ರೇಣುಕಾ ಹೇಳಿದ್ದಾರೆ.
ಈ ಭಾಗದಲ್ಲಿ ಕಳೆದ 1 ತಿಂಗಳಿಂದ ಚಿರತೆಗಳ ಹಾವಳಿ ಹೆಚ್ಚಾಗಿದೆ. ನ.4 ರಂದು ದೇಗುಲದ ಅಡುಗೆ ಭಟ್ಟನ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಹೀಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿರುವ ಕಾರಣ ಈ ಪ್ರದೇಶದಲ್ಲಿ ಭಕ್ತರು ಹಾಗೂ ಸಾರ್ವಜನಿಕರಿಗೆ ನಂ.6ರಿಂದ ಅರಣ್ಯ ಇಲಾಖೆ ನಿರಾಪೇಕ್ಷಣಾ ಪತ್ರ ನೀಡುವವರಿಗೆ ಸಾರ್ವಜನಿಕರ ಪ್ರವೇಶ ಸಂಪೂರ್ಣ ನಿಷೇಧ ಹೇರಲಾಗಿದೆ. ದೇವಸ್ಥಾನದಲ್ಲಿ ಕೆಲಸ ಮಾಡುವ ಸಿಬ್ಬಂದಿ ಬಗ್ಗೆ ಜಾಗೃತಿ ವಹಿಸಲು ದೇವಸ್ಥಾನ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ.