ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘ ಅಭಿವೃದ್ಧಿ ಪಥದಲ್ಲಿ

ರಾಯಚೂರು.ಸೆ.೦೫- ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಂಘದ ಸ್ವಂತ ಕಟ್ಟಡದಲ್ಲಿ ಹಮ್ಮಿಕೊಂಡಿದ್ದ ಬ್ಯಾಂಕಿನ ೨೬ನೇ ವರ್ಷದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷಸ್ಥಾನ ವಹಿಸಿ ದೀಪ ಬೆಳಗಿಸುವುದರ ಮಾಲಕ ಮಾತನಾಡಿದ ಬ್ಯಾಂಕಿನ ಅಧ್ಯಕ್ಷರಾದ ಬೋಜನಗೌಡ ಹೊಸಪೇಟೆ ಇವರು ವರ್ಷದಿಂದ ವರ್ಷಕ್ಕೆ ನಮ್ಮ ಬ್ಯಾಂಕ್ ಅಭಿವೃದ್ಧಿ ಪಥದಲ್ಲಿದೆ.
ಸರ್ವ ಗ್ರಾಹಕರೂ ಸಹಿತ ತಮ್ಮ ಮರು ಪಾವತಿಯನ್ನು ಸರಿಯಾದ ಸಮಯಕ್ಕೆ ಪಾವತಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದ್ವಿಚಕ್ರ ವಾಹನ ಮತ್ತು ಇನ್ನಿತರ ಯೋಜನೆಗಳಿಗೆ ಸಾಲವನ್ನು ಕೊಡಲಾಗುವುದು, ಲಿಖಿತ ಖಾತೆಯೊಂದಿಗೆ ಕಂಪ್ಯೂಟರ್ ತಂತ್ರಜ್ಞಾನವನ್ನು ಬ್ಯಾಂಕಿನಲ್ಲಿ ಅಳವಡಿಸುವ ಯೋಜನೆಯಲ್ಲಿದ್ದೇವೆ ಎಂದು ಹೇಳಿದರು.
ನಂತರ ಸಂಘದ ಸರ್ವ ಪದಾಧಿಕಾರಿಗಳು ಸೇರಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಂಗಳಾರುತಿ ಬೆಳಗಿದರು.
ನಂತರ ಸಭೆಯಲ್ಲಿ ಬ್ಯಾಂಕಿನ ಅಭಿವೃದ್ಧಿಯ ಬಗ್ಗೆ ನಾನಾ ವಿಚಾರಗಳನ್ನು ಚರ್ಚಿಸುವ ಮೂಲಕ ನಿರ್ಧಾರಗಳನ್ನು ತಗೆದುಕೊಳ್ಳಲಾಯಿತು.
ಈ ಸಂದರ್ಭದಲ್ಲಿಹಂಪಣ್ಣ ಶೆಟ್ಟಿ,ಅಂಬಮ್ಮ ಹಿರೇಮಠ,ಪ್ರಭಾವತಿ,ವಿಕ್ರಮ್ ಪಾಟೀಲ,ಮಿರ್ಜಾಪೂರ ಗೌಡ್ರು,ಡಾ. ಚನ್ನಯ್ಯ ಸ್ವಾಮಿ,ಸಂಘದ ಕಾರ್ಯದರ್ಶಿಗಳಾದ ವಿನಯಕುಮಾರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.