ಶ್ರೀ ಭಗೀರಥ ಜಯಂತಿ ಆಚರಣೆ

ಗಂಗಾವತಿ, ಮೇ.19: ಸ್ಥಳೀಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಶ್ರೀ ಭಗೀರಥ ಜಯಂತಿ ಆಚರಿಸಲಾಯಿತು.
ಭಗೀರಥ ಅವರ ‌ಭಾವಚಿತ್ರಕ್ಕೆ ಶಾಸಕ ಪರಣ್ಣ ಮುನವಳ್ಳಿ ಅವರು ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತದೆ. ಕರೋನ ಎರಡನೇ ಅಲೆ ವ್ಯಾಪಕವಾಗಿ ಹೆಚ್ಚಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಹೊರಗಡೆ ಹೋದಾಗ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅನಾವಶ್ಯಕವಾಗಿ ಓಡಾಡದೇ ಮನೆಯಲ್ಲೇ ಇರಬೇಕು. ನಿಮ್ಮ ಜೀವ ನಿಮ್ಮ ಕೈಯಲ್ಲಿ ಯಾವುದೇ ಕಾರಣಕ್ಕೆ ನಿರ್ಲಕ್ಷ್ಯ ಮಾಡಬೇಡಿ ಎಂದು ಸಾರ್ವಜನಿಕರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡರಾದ ಯಂಕಪ್ಪ ಕಟ್ಟಿಮನಿ , ಮಹೇಶ ಜವಳಿ ಇದ್ದರು.