ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ


ರಾಯಚೂರು,ನ.೧೨- ನಗರದ ಗುವಿವಿ ಸ್ನಾತಕೋತ್ತರ ಕೇಂದ್ರದಲ್ಲಿ ಶನಿವಾರ ಬೆಳಿಗ್ಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಡಾ.ಪಾರ್ವತಿ ಸಿ.ಎಸ್. ಅವರು ಪುಷ್ಪ ನಮನ ಸಲ್ಲಿಸಿದರು,
ಸಮಾಜ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಪ್ರೊ.ನುಸ್ರತ್ ಫಾತೀಮಾ, ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ವಾಸುದೇವ ಜೇವರ್ಗಿ,
ವಿವಿಧ ವಿಭಾಗಗಳ ಉಪನ್ಯಾಸಕರು ಸೇರಿದಂತೆ ಸಿಬ್ಬಂದಿವರ್ಗದವರು ಪುಷ್ಪ ನಮನ ಸಲ್ಲಿಸಿದರು.