ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆ

ಧಾರವಾಡ, ಮಾ.8: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) 297ನೇ ಜಯಂತಿಯನ್ನು ಆಚರಿಸಲಾಯಿತು.

ಹುಬ್ಬಳ್ಳಿ ಧಾರವಾಡ ಬಲಿಜ ಸಂಘದ ಅಧ್ಯಕ್ಷ ಪ್ರಶಾಂತ್ ಕುಮಾರ ನಾಯ್ಡು ಉದ್ಘಾಟಿಸಿದರು. ಹುಬ್ಬಳ್ಳಿ ಧಾರವಾಡ ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ವೆಂಕಟೇಶ್ ನಾಯ್ಡು, ಜ್ಯೋತಿ ಸತೀಶ್ ನಾಯ್ಡು, ಲತಾ ರವಿ ನಾಯ್ಕ, ಸಮೀರ್ ಕುಮಾರ್ ನಾಯ್ಡು, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ಬಲಿಜ ಸಮುದಾಯದ ಗಣ್ಯರು, ಇತರರು ಜಯಂತಿಯಲ್ಲಿ ಭಾಗಿಯಾಗಿದ್ದರು.