ಶ್ರೀ ಯೋಗಿನಾರೇಯಣ ಯತೀಂದ್ರ ಜಯಂತಿ ಸರಳ ಆಚರಣೆ

ಸಂಜೆವಾಣಿ ವಾರ್ತೆ
ದಾವಣಗೆರೆ; ಮಾ.26; ನಗರದ ಬಲಿಜ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಮಹಾನಗರ ಪಾಲಿಕೆ, ಜಿಲ್ಲಾ ಬಲಿಜ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಯೋಗಿನಾರೇಯಣ ಯತೀಂದ್ರ(ಕೈವಾರ ತಾತಯ್ಯ) ಜಯಂತಿಯಯನ್ನು ಸರಳವಾಗಿ ಆಚರಿಸಲಾಯಿತು. ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್. ಬಳ್ಳಾರಿ ಅವರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸರಳವಾಗಿ ನೆರವೇರಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಯೋಗಿನಾರೇಯಣ ಜಿಲ್ಲಾ ಬಲಿಜ ಸಂಘದ ಅಧ್ಯಕ್ಷರಾದ ನರಸಿಂಹಮೂರ್ತಿ, ಬಲಿಜ ಸಂಘದ ಮಹಿಳಾ ಜಿಲ್ಲಾಧ್ಯಕ್ಷರಾದ ಜಯದೇವಮ್ಮ, ಶ್ರೀಧರ್, ರಮಣಯ್ಯ ಇನ್ನಿತರರು ಉಪಸ್ಥಿತರಿದ್ದರು.