ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ

ಕಂಪ್ಲಿ ಜ 14 : ಪಟ್ಟಣದ ತಹಸಿಲ್ ಕಚೇರಿ ಸಭಾಂಗಣದಲ್ಲಿ ಗುರುವಾರ ತಾಲೂಕಾಡಳಿತ ವತಿಯಿಂದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಶಿರಸ್ತೇದಾರ ರೇಖಾ ಮಾತನಾಡಿ, ಶಿವಯೋಗಿ ಸಿದ್ದರಾಮೇಶ್ವರರು 68 ಸಾವಿರ ವಚನಗಳನ್ನು ರಚಿಸಿ ಹಾಡಿದ್ದಾರೆ. ಅವುಗಳ ಪೈಕಿ ಸದ್ಯ 1679 ವಚನಗಳು ಮಾತ್ರ ಲಭ್ಯವಾಗಿವೆ. ಬಸವಣ್ಣ ಹಾಗು ಸಿದ್ದರಾಮೇಶ್ವರರು ಶ್ರೇಷ್ಠ ವಚನಕಾರರಾಗಿದ್ದಾರೆ.ಬಸವಣ್ಣ ರಾಜಕೀಯ ಹಾಗು ಸಾಮಾಜಿಕವಾಗಿ ಹೆಚ್ಚು ಒತ್ತು ನೀಡಿದರೆ, ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುವ ವ್ಯಕ್ತಿತ್ವದವರಾಗಿದ್ದರು. ಆಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ಮುಂದಿನ ಪೀಳಿಗೆಗೆ ದಿವ್ಯಜ್ಞಾನಿಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಸಿದ್ದರಾಮೇಶ್ವರರ ಚಿಂತನೆಗಳು ದಾರಿದೀಪವಾಗಿವೆ ಎಂದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಎ.ಗಣೇಶ್, ಎಫ್ ಡಿ ಎ ಮಾಲತೇಶ್ ದೇಶಪಾಂಡೆ, ಗ್ರಾಮಲೆಕ್ಕಾಧಿಕಾರಿಗಳಾದ ಶಿವರುದ್ರಯ್ಯ, ಮೊಹಮ್ಮದ್ ಶರೀಫ್,ವಿರೂಪಾಕ್ಷಿಗೌಡ ಸೇರಿದಂತೆ ಅನೇಕರಿದ್ದರು.