ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ

ಕಲಬುರಗಿ: ಜ 14: ಕೋವಿಡ್ ಹಿನ್ನೆಲೆ ಸರ್ಕಾರದ ವತಿಯಿಂದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಗುರುವಾರ ಸರಳವಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ಡಾ: ಶಂಕರ ವಣಿಕ್ಯಾಳ ಅವರು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಮಾಡಿ ಗೌರವ ಸಲ್ಲಿಸಿದರು.. ಸಿದ್ಧರಾಮೇಶ್ವರ ಅವರ ತತ್ವಗಳನ್ನು ನಾವೆಲ್ಲರೂ ಪಾಲಿಸಬೇಕು ಅವರ ಮಾರ್ಗದರ್ಶನದಲ್ಲಿ ನಾವು ನಡೆಯಬೇಕೆಂದು ಹೇಳಿದರು. ಇದೇ ಸಂದರ್ಭದಲ್ಲಿ ಭೂವಿ ಸಮಾಜದ ಮುಖಂಡರಿಗೆ ಮತ್ತು ಅಧಿಕಾರಿಗಳಿಗೆ ಶುಭ ಹಾರೈಸಿದರು.
ಈ ಕಾರ್ಯಕ್ರಮದಲ್ಲಿ ಭೂವಿ ಸಮಾಜದ ಮುಖಂಡರಾದ ಮಲ್ಲಿಕಾರ್ಜುನ ಕುಸ್ತಿ, ತಿಪ್ಪಣ ಒಡಿಯರ ಶ್ರೀ ಭೀಮಾಶಂಕರ, ಶ್ರೀ ಹರಿಜಾದು, ಅಣಪ್ಪ ಸರಳಕೆ, ಸಂಜು ಮಂಜಳಕರ ಸಮಾಜದ ಮುಖಂಡರ ಸೇರಿದಂತೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಅವರು ಭಾವ ಚಿತ್ರಕ್ಕೆ ಪುಷ್ಫಾರ್ಚನೆ ಮಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.