ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ

ಗದಗ,ಜ17: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‍ದಲ್ಲಿ ಸರಳವಾಗಿ ಆಚರಿಸಲಾಯಿತು. ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಶಿವಯೋಗಿ ಸಿದ್ಧರಾಮೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಗುಂಜೀಕರ್ , ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ ಸೇರಿದಂತೆ ಸಮಾಜದ ಮುಖಂಡರು ಹಾಜರಿದ್ದರು.