ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಗಲಿಕೆಗೆ ಅಷ್ಠಗಿ ಕಂಬನಿ

ಕಲಬುರಗಿ,ಜ.3-ತಮ್ಮ ಪ್ರವಚನಗಳ ಮೂಲಕ ಕೋಟ್ಯಂತರ ಜನರಿಗೆ ಜ್ಞಾನದಾಸೋಹ ನೀಡಿದ ನಡೆದಾಡುವ ದೇವರು, ವಿಜಯಪುರದ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶರಾದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ. ಅಂಬಾರಾಯ ಅಷ್ಠಗಿ ಕಂಬನಿ ಮಿಡಿದಿದ್ದಾರೆ.
ಪೂಜ್ಯರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಕ್ತರಿಗೆ ದೇವರು ನೀಡಲಿ ಈ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಡಾ.ಅಂಬಾರಾಯ ಅಷ್ಠಗಿ ಸಂತಾಪ ಸೂಚಿಸಿದ್ದಾರೆ.