ಶ್ರೀ ಸಿದ್ಧೇಶ್ವರ ವಿದ್ಯಾವರ್ಧಕ ಸಂಸ್ಥೆಯ ಪ್ರೌಢಶಾಲೆಯ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಥಣಿ :ಸೆ.11: ಶಾಲಾ ಶಿಕ್ಷಣ ಇಲಾಖೆ ಅಥಣಿ ಹಾಗೂ ಸರಕಾರಿ ಶಾಲೆ ಪಾರ್ಥನಹಳ್ಳಿ ಇವರ ಸಹಯೋಗದಲ್ಲಿ ಅಥಣಿ ತಾಲೂಕಾ ಮಟ್ಟದ ಕ್ರೀಡಾಕೂಟವು ಜರುಗಿತು.
ತಾಲೂಕಿನ ಮದಭಾವಿ ಗ್ರಾಮದ ಶ್ರೀ ಸಿದ್ಧೇಶ್ವರ ವಿದ್ಯಾ ವರ್ಧಕ ಸಂಸ್ಥೆಯ ಪ್ರೌಢಶಾಲಾ ವಿಭಾಗದ ಅಥಣಿ ತಾಲೂಕಾ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ,
ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ, ಶಾಲೆಗೆ ಹಾಗೂ ಮದಭಾವಿ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ,
ವಿಜೇತ ತಂಡಕ್ಕೆ ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲ ಕ್ರೀಡಾಪಟುಗಳಿಗೆ ದೈಹಿಕ ಶಿಕ್ಷಕರಿಗೆ, ತರಬೇತುದಾರರಿಗೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು ಶಾಲೆಯ ಮುಖ್ಯೋಪಾಧ್ಯಾಯರು, ಗುರುಗಳು, ಗುರುಮಾತೆಯರು ಹಾಗೂ ಎಲ್ಲ ಸಿಬ್ಬಂದಿ ವರ್ಗದವರು, ಶ್ರೀ ಸಿದ್ಧೇಶ್ವರ ವಿದ್ಯಾ ವರ್ಧಕ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಸಮಸ್ತ ಪಾಲಕ ಬಂಧುಗಳು ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.