ಶ್ರೀ ಸೂಗೂರೇಶ್ವರ ಸ್ವಾಮಿ, ಶ್ರೀ ನಾಗರಯಲ್ಲಮ್ಮ ದೇವಿಗೆ ವಿಶೇಷ ಪೂಜೆ

ರಾಯಚುರು,ಏ.೦೪- ದೇವಸೂಗುರ ಗ್ರಾಮದ ಆರಾಧ್ಯದೈವ ಸುಕ್ಷೇತ್ರನಾಥ ಶ್ರೀ ಸೂಗೂರೇಶ್ವರ ಸ್ವಾಮಿ ಹಾಗೂ ಶ್ರೀ ನಾಗರಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಬಸನಗೌಡ ದದ್ದಲ್‌ರವರು ಕ್ಷೇತ್ರದ ಹಿತಕ್ಕಾಗಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಮಾನ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಬಿ.ವಿ ನಾಯಕರವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎ. ವಸಂತ ಕುಮಾರ್‌ರವರು, ಪ್ರಚಾರ ಸಮಿತಿ ಅಧ್ಯಕ್ಷರಾದ ಕೆ.ಶಾಂತಪ್ಪಣ್ಣನವರು, ರಾಯಚೂರು ಗ್ರಾಮೀಣ ಕ್ಷೇತ್ರದ ಜನಪ್ರಿಯ ಶಾಸಕರಾದ ಬಸನಗೌಡ ದದ್ದಲ್‌ರವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳುಗಳು, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳು ದರ್ಶನ ಪಡೆದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೆ. ಪಂಪಾಪತಿ, ಮಲ್ಲಿಕಾರ್ಜುನ ಗೌಡ, ಸುತ್ತಮುತ್ತಲಿನ ಗ್ರಾಮಗಳ ಮುಖಂಡರುಗಳು, ಗ್ರಾಮದ ಮುಖಂಡರುಗಳು, ವಿವಿಧ ಘಟಕಗಳ ಸರ್ವ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.