ಶ್ರೇಷ್ಠ ಸಂವಿಧಾನ ನಮ್ಮದಾಗಿದೆ:ಸಣ್ಣ ಸಿದ್ರಾಮಪ್ಪಗೌಡ

ಸೈದಾಪುರ:ಜ.27:ಸಮಾನತೆ, ಮಾನವೀಯತೆ, ಸಹೋದರತೆ, ಜಾತ್ಯತೀತ ಸಮಾಜವಾದಿ ಆಶಯಗಳನ್ನು ಮೂಡಿಸುವ ಶ್ರೇಷ್ಠ ಸಂವಿಧಾನ ನಮ್ಮದಾಗಿದೆ. ಇದರ ಅನುಷ್ಠಾನದ ದಿನವನ್ನು ಗಣರಾಜ್ಯ ದಿನವೆಂದು ಸಂಭ್ರಮಿಸುವ ಮೂಲಕ ಸಂವಿಧಾನದ ಮಹತ್ವ ಎಲ್ಲರೂ ತಿಳಿಯುವಂತಾಗಬೇಕು ಎಂದು ವಿದ್ಯಾ ವರ್ಧಕ ಸಂಘದ ಅಧ್ಯಕ್ಷ ಸಣ್ಣ ಸಿದ್ರಾಮಪ್ಪಗೌಡ ಬೆಳಗುಂದಿ ಅಭಿಪ್ರಾಯಪಟ್ಟರು.
ಪಟ್ಟಣದ ವಿದ್ಯಾ ವರ್ಧಕ ಸಂಘದ ವಿವಿಧ ವಿಭಾಗಗಳಿಂದ 75ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಂವಿಧಾನ ಆಶಯದ ಅನ್ವಯ ದೇಶದ ಪ್ರಗತಿ ಆಗಬೇಕಾಗಿದೆ. ಇದಕ್ಕಾಗಿ ಪ್ರತಿಯೊಬ್ಬರು ಹಕ್ಕುಗಳಂತೆ ಕರ್ತವ್ಯಗಳಗನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಅಂದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು. ವಿದ್ಯಾರ್ಥಿಗಳು ಉತ್ತಮ ಗುರಿಯೊಂದಿಗೆ ಪ್ರಯತ್ನ ಮಾಡಿದಾಗ ಮಾತ್ರ ಸಾಧನೆ ನಮ್ಮದಾಗುತ್ತದೆ. ಹಿಂದುಳಿದ ಗಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಪರಿಗಿಣಿಸಿ ಹಿರಿಯರು ಈ ಸಂಸ್ಥೆಯನ್ನು ಕಟ್ಟಿದ್ದಾರೆ. ಇತ್ತಿಚಿಗೆ ನೂತನವಾಗಿ ಪದವಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯವನ್ನು ಅಸ್ಥಿತ್ವಕ್ಕೆ ತರಲಾಗಿದ್ದೂ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಿವಿ ಮಾತುಗಳನ್ನು ಹೇಳಿದರು.
ಇದಕ್ಕೂ ಮುನ್ನ ಮಹಾತ್ಮ ಗಾಂಧಿಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ಸಂಸ್ಥೆಯ ಹಿರಿಯ ಸದಸ್ಯರಾದ ಭೀಮರೆಡ್ಡಿ ಪಾಟೀಲ ಶೆಟ್ಟಹಳ್ಳಿ, ಬಸವರಾಜಯ್ಯ ಸ್ವಾಮಿ ಬದ್ದೇಪಲ್ಲಿ, ಬಸವರಾಜ ಸ್ವಾಮಿ ಬೆಳಗುಂದಿ, ಸಹ ಕಾರ್ಯದರ್ಶಿ ಕೆ.ಬಿ.ಗೋವರ್ಧನ, ಆಡಳಿತ ಮಂಡಳಿಯ ಸದಸ್ಯರಾದ ಚೆನ್ನಾರಡ್ಡಿ ಹುಣಸೇಮರ, ಸುರೇಶ ಆನಂಪಲ್ಲಿ, ಮುಖ್ಯಗುರು ಲಿಂಗಾರಡ್ಡಿ ನಾಯಕ, ಪ್ರಾಂಶುಪಾಲ ಹಂಪಣ್ಣ ಸಜ್ಜನಶೆಟ್ಟಿ, ಜಿ.ಎಂ.ಗುರುಪ್ರಸಾದ, ಕರಬಸಯ್ಯ ದಂಡಿಗಿಮಠ, ದೈಹಿಕ ಶಿಕ್ಷಕ ವಿಶ್ವನಾಥರೆಡ್ಡಿ ಪಾಟೀಲ ಕಣೇಕಲ್, ರಾಜಶೇಖರ ಪಾಟೀಲ, ವೆಂಕಟೇಶ ಸಗರ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿಗಳು ಸೇರಿದಂತೆ ಇತರರಿದ್ದರು.