ಶ್ರೇಷ್ಠ ಸಮಾಜ ಸುಧಾರಕ ಸಂತ ವಿನೋಬ ಭಾವೆ

ಕಲಬುರಗಿ,ನ.15: ಮಹಾತ್ಮ ಗಾಂಧೀಜಿಯವರ ನೆಚ್ಚಿನ ಶಿಷ್ಯರಾಗಿ, ಅವರ ತತ್ವ-ಸಿದ್ಧಾಂತಗಳನ್ನು ಪಾಲಿಸಿಕೊಂಡು ಬಂದವರು ಸಂತ ವಿನೋಬ ಭಾವೆಯವರು. ಅಗತ್ಯಕ್ಕಿಂತ ಹೆಚ್ಚು ಭೂಮಿಯನ್ನು ಹೊಂದಿದ್ದ ಅನೇಕ ಜಮೀನುದಾರರ ಮನವೊಲಿಸಿ, ಭೂರಹಿತರಿಗೆ ಭೂಮಿಯನ್ನು ನೀಡುವ ಭೂದಾನ ಚಳುವಳಿಯ ಹರಿಕಾರರಾಗಿ, ಶ್ರೇಷ್ಠ ಸಮಾಜ ಸುಧಾರಕರಾಗಿ ಅಮೋಘವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ‘ಎಂ.ಎಂ.ಎನ್ ಟ್ಯೂಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ಸಂತ ವಿನೋಬ ಭಾವೆಯವರ ಸ್ಮರಣೋತ್ಸವ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಭಾವೆಯವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಮಾತನಾಡುತ್ತಿದ್ದ ಅವರು, ನಮ್ಮ ರಾಜ್ಯದಲ್ಲಿ ಅರಸು ಸರ್ಕಾರ ಊಳುವವನೇ ಭೂ ಒಡೆಯ ನೀತಿಯನ್ನು ಅನುಷ್ಠಾನಕ್ಕೆ ತಂದು ಅನೇಕರಿಗೆ ಅನಕೂಲ ಮಾಡಿಕೊಟ್ಟಿತು. ಇಂತಹ ಕ್ರಾಂತಿಕಾರಿ ಸುಧಾರಣೆಗೆ ಭಾವೆಯವರು ಪ್ರೇರಕ ಶಕ್ತಿಯಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಬಸಯ್ಯಸ್ವಾಮಿ ಹೊದಲೂರ ದೇವೇಂದ್ರಪ್ಪ ಗಣಮುಖಿ, ಸಿದ್ದರಾಮ ತಳವಾರ, ಸೋಮೇಶ ಡಿಗ್ಗಿ, ಅಮರ ಜಿ.ಬಂಗರಗಿ, ಓಂಕಾರ ಗೌಳಿ ಸೇರಿದಂತೆ ಮತ್ತಿತರರು ಇದ್ದರು.