ಸಂಕಲ್ಪ ಪತ್ರ ಗ್ಯಾರಂಟಿ ಕಾರ್ಡ್: ಮೋದಿ

ಗಯಾ,ಏ.೧೬- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಇದೇ ಮೊದಲ ಬಾರಿಗೆ’ ಮೋದಿ ಗ್ಯಾರಂಟಿ ಕಾರ್ಡ್’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೇಶದಲ್ಲಿ “ಮುಂದಿನ ಐದು ವರ್ಷಗಳ ಕಾಲ ಮೋದಿ ‘ಗ್ಯಾರಂಟಿ ಕಾರ್ಡ್’ ಅನ್ನು ನವೀಕರಿಸಲಾಗುವುದು, ಬಡವರಿಗೆ ಐದು ವರ್ಷಗಳಲ್ಲಿ ಮೂರು ಕೋಟಿ ಮನೆ ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಿಹಾರದ ಗಯಾದಲ್ಲಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು ೭೦ ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಯೋಜನೆ ವಿಸ್ತರಿಸಿ ಉಚಿತ ಚಿಕಿತ್ಸ ನೀಡಲಾಗುವುದು, ಬಡವರಿಗೆ ಉಚಿತ ಪಡಿತರ ವಿತರಣೆ ಮುಂದುವರಿಸಲು ನಿರ್ಧರಿಸಲಾಗಿದೆ. ೫ ಲಕ್ಷದವರೆಗೆ ಉಚಿತ ಚಿಕಿತ್ಸೆ ಸೌಲಭ್ಯ, ಪಿಎಂ-ಕಿಸಾನ್ ಸಮ್ಮಾನ್ ನಿಧಿ ಮುಂದುವರಿಸುವುದು ಇವೆಲ್ಲವೂ ಮೋದಿ ಭರವಸೆಗಳು ಎಂದು ತಿಳಿಸಿದ್ದಾರೆ.
ದೇಶದ ಸಂವಿಧಾನ ಪರಿಶುದ್ಧವಾಗಿದೆ. ಸಂವಿಧಾನ ರಚನಾಕಾರರು ಸಮೃದ್ಧ ಭಾರತದ ಕನಸು ಕಂಡಿದ್ದರು. ಆದರೆ, ದೇಶದಲ್ಲಿ ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಅವಕಾಶ ಕಳೆದುಕೊಂಡಿದೆ. ದೇಶದಲ್ಲಿ ೨೫ ಕೋಟಿ ಬಡವರು ನಿಮ್ಮ ಸೇವಕ ಬಡತನದಿಂದ ಹೊರ ತಂದಿದ್ದಾರೆ ಎಂದು ತಿಳಿಸಿದ್ದಾರೆ.
ಬಿಹಾರದಲ್ಲಿ ಬಿಜೆಪಿ, ಜೆಡಿಯು, ಎಲ್‌ಜೆಪಿ ಸೇರಿದಂತೆ ಇನ್ನಿತರೆ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು ಚುನಾವಣೆ ಎದುರಿಸುತ್ತಿವೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ ಎಂದು ಅವರು ಮನವಿ ಮಾಡಿದರು.

ಘಮಾಂಡಿಯಾ ಮೈತ್ರಿಕೂಟ; ವಾಗ್ದಾಳಿ
ವಿರೋಧ ಪಕ್ಷಗಳ ಮೈತ್ರಿಕೂಟ ‘ಘಮಾಂಡಿಯಾ ಘಟಬಂಧನ್’- ಅಹಂಕಾರದಿಂದ ಕೂಡಿದ ಮೈತ್ರಿಕೂಟ ಎಂದು ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ದೂರದೃಷ್ಟಿ ಅಥವಾ ನಂಬಿಕೆ ಇಲ್ಲದ ಮೈತ್ರಿಕೂಟ ಎಂದು ಲೇವಡಿ ಮಾಡಿದ್ದಾರೆ.
‘ಘಮಾಂಡಿಯಾ ಘಟಬಂಧನ್’ ಪ್ರಚಾರದ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾಡಿದ ಕೆಲಸವನ್ನು ತಾವು ಮಾಡಿದ ಕೆಲಸ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ಮಾಡುವ ಮೂಲಕ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಯಾರು ಯಾವ ಕೆಲಸ ಮಾಡಿದ್ದಾರೆ ಎನ್ನುವುದು ಇಡೀ ಬಿಹಾರ ಜನರಿಗೆ ಗೊತ್ತಿದೆ ಎಂದಿದ್ದಾರೆ.
ಬಿಹಾರದ ಗಯಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು ನಿತೀಶ್ ಕುಮಾರ್ ಅವರು ಕೇಂದ್ರ ಸರ್ಕಾರಸ ಸಹಕಾರಯಿಂದ ಕೆಲಸ ಮಾಡಿದ್ದಾರೆ. ರಾಜ್ಯಕ್ಕೆ ಮುಂದಿನ ದಿನಗಳಲ್ಲಿ ಸಹಕಾರ ಬೆಂಬಲ ಮುಂದುವರಿಯಲಿದೆ ಎಂದಿದ್ದಾರೆ.