ಸಂಕಲ್ಪ ಸಮಾವೇಶದ ಕುರಿತು ನಾಳೆ ಪೂರ್ವಭಾವಿ ಸಭೆ

ಕಲಬುರಗಿ,ಜ.12- ಕೆಪಿಸಿಸಿ ವತಿಯಿಂದ ಜ.18ರಂದು ಹಮ್ಮಿಕೊಂಡಿರುವ ಸಂಕಲ್ಪ ಸಮಾವೇಶದ ಪೂರ್ವ ಸಿದ್ದತೆಯ ಕುರಿತು ಚರ್ಚಿಸಲು ನಾಳೆ ಜ.13 ಮದ್ಯಾಹ್ನ 12-30ಕ್ಕೆ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸಭೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ನಾಳಿನ ಪೂರ್ವಭಾವಿ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆಯವರು ಪಕ್ಷದ ಪ್ರಮುಖರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ, ಬ್ಲಾಕ್ ಮತ್ತು ವಿವಿಧ ಘಟಕಗಳ ಪ್ರಮುಖರು ತಪ್ಪದೇ ನಾಳಿನ ಸಭೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಪ್ರಕಟಣೆಯಲ್ಲಿ ಕೋರಿದ್ದಾರೆ.