ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆಹಾರ ಸಾಮಾಗ್ರಿ ಕಿಟ್

ಚನ್ನಗಿರಿ.ಮೇ.೨೯: ಮಹಾಮಾರಿ ಕೊರೊನಾದಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮನೆ ಬಾಗಿಲಿಗೆ ಅಗತ್ಯ ಸಾಮಾಗ್ರಿಗಳ ಆಹಾರ ಧಾನ್ಯ ಕಿಟ್ ವಿತರಣೆ ಮಾಡಲಾಗುವುದೆಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ವಿ ಶಿವಗಂಗಾ ತಿಳಿಸಿದ್ದಾರೆ. ಚನ್ನಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಯಾರು ಸಂಕಷ್ಟದಲ್ಲಿದ್ದಾರೆ ಅಂತವರ ಕುಟುಂಬಗಳಿಗೆ ನಾವೇ ಮನೆ ಬಾಗಿಲಿಗೆ ಹೋಗಿ ಆಹಾರ ಧಾನ್ಯದ ಕಿಟ್ ವಿತರಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಕಳೆದ ಬಾರಿ 2 ತಿಂಗಳು ಲಾಕ್ ಡೌನ್ ಘೋಷಣೆಯಾದ ಕಾರಣ ಚನ್ನಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಿ ಸುಮಾರು 35 ಸಾವಿರ ಕುಟುಂಬಗಳಿಗೆ ಅಗತ್ಯ ವಸ್ತುಗಳ ಆಹಾರ ಧಾನ್ಯ ಕಿಟ್ ವಿತರಣೆ ಮಾಡಲಾಗಿತ್ತು. ಈ ಬಾರಿಯೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕಿಸಾನ್ ಕಾಂಗ್ರೆಸ್ ವತಿಯಿಂದ ನೆರವಾಗಲು ನಿರ್ಧಾರ ಮಾಡಲಾಗಿದೆ. ಈ ಬಾರಿಯೂ ಆಹಾರಧಾನ್ಯ ಕಿಟ್ ವಿತರಣೆ ಮಾಡುವ ಕಾರ್ಯಕ್ರಮವನ್ನ ಮೇ ತಿಂಗಳ ಮೊದಲ ವಾರ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಸರ್ಕಾರ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಕಾಲಾವಕಾಶ ನೀಡಿದ್ದ ಕಾರಣ ಈ  ಕಾರ್ಯಕ್ರಮ ಮುಂದೂಡಲಾಯಿತು. ಅಲ್ಲದೇ, 2 ನೇ ಕೊರೊನಾ ಅಲೆ ಹೆಚ್ಚಾಗುತ್ತಿರುವ ಕಾರಣ ಹಾಗೂ  ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದ ಹಿನ್ನೆಲೆ ಆಹಾರ ಧಾನ್ಯ ಕಿಟ್ ನೀಡಲು ಸಾಧ್ಯವಾಗಲಿಲ್ಲ. ಲಾಕ್ ಡೌನ್ ತೆರವುಗೊಳಿಸಬಹುದೆಂದು ನಿರೀಕ್ಷೆ ಮಾಡಲಾಗಿತ್ತು ಆದರೆ ಇದೀಗ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಲಾಕ್ ಡೌನ್ ಮುಂದುವರೆಸಲಾಗಿದೆ. ಕೋವಿಡ್ ನಿಂದ ಇದೀಗ ಬಡವರು, ಕೂಲಿ ಕಾರ್ಮಿಕರಿಗೆ, ದುಡಿಯುವ ಕೈಗಳಿಗೆ ಕೆಲಸವಿದ ಕಾರಣ ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಈ ಹಿನ್ನೆಲೆ ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಯಾರೇ ಸಂಕಷ್ಟದಲ್ಲಿದ್ದರು ಮಾಹಿತಿ ನೀಡಿದರೆ ಸ್ಥಳೀಯ ಕಾಂಗ್ರೆಸ್ ಮುಖಂಡರ ಸಹಯೋಗದೊಂದಿಗೆ  ನಿಮ್ಮ ಮನೆ ಬಾಗಿಲಿಗೆ ಅಗತ್ಯ ವಸ್ತುಗಳ ಆಹಾರ ಧಾನ್ಯ ಕಿಟ್ ವಿತರಣೆ ಮಾಡುತ್ತೇವೆ ಎಂದರು. Attachments area