
ನವದೆಹಲಿ,ಏ.24- ಸುಡಾನ್‌ನಲ್ಲಿ ಭದ್ರತಾ ಪರಿಸ್ಥಿತಿ ಕ್ಲಿಷ್ಟಕರವಾಗಿದೆ. ಸಂಕಷ್ಟದಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಜೆಡ್ಡಾಗೆ ಭಾರತೀಯ ವಾಯುಪಡೆಯ ಎರಡು ವಿಮಾನಗಳು ಹಾಗು ನೌಕಾಪಡೆಯ ಹಡಗುಗಳನ್ನು ನಿಯೋಜಿಸಲಾಗಿದೆ.
ಸಂಘರ್ಷ ಪೀಡಿತ ದೇಶದಲ್ಲಿ ಸಿಲುಕಿರುವ 3,000 ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಹಲವು ಆಯ್ಕೆಗಳಿಗೆ ಒತ್ತು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ನೀಡಿರುವ ಹೇಳಿಕೆಯಲ್ಲಿ, ಭಾರತ, ಈಗಾಗಲೇ ಎರಡು ವಾಯುಪಡೆಯ ವಿಮಾನಗಳನ್ನು ಜೆಡ್ಡಾದಲ್ಲಿ ಕಾಯ್ದಿರಿಸಿದೆ.ಜೊತೆಗೆ ಭಾರತೀಯ ನೌಕಾ ಹಡಗು ‘ಸುಮೇಧಾ’ ಪೋರ್ಟ್ ಸುಡಾನ್ ತಲುಪಿದೆ ಎಂದು ಹೇಳಿದೆ.
ಸೂಪರ್ ಹರ್ಕ್ಯುಲಸ್ ಮಿಲಿಟರಿ ಸಾರಿಗೆ ವಿಮಾನ ನಿಯೋಜಿಸುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಅವರು ಆಕಸ್ಮಿಕ ಸ್ಥಳಾಂತರಿಸುವ ಯೋಜನೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರ ಸುರಕ್ಷತೆ ಮತ್ತು ಭದ್ರತೆ ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಸುಡಾನ್‌ನಲ್ಲಿ ಸಿಲುಕಿರುವ ಮತ್ತು ಸ್ಥಳಾಂತರಿಸಲು ಬಯಸುವ ಭಾರತೀಯರ ಸುರಕ್ಷಿತ ಚಲನೆಗಾಗಿ ವಿವಿಧ ಪಾಲುದಾರರೊಂದಿಗೆ ನಿಕಟವಾಗಿ ಸಹಕರಿಸುತ್ತಿದ್ದೇವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ವಿದೇಶಾಂಗ ಸಚಿವಾಲಯ, ಸುಡಾನ್ ಅಧಿಕಾರಿಗಳಲ್ಲದೆ, ಯುಎನ್, ಸೌದಿ ಅರೇಬಿಯಾ, ಯುಎಇ, ಈಜಿಪ್ಟ್ ಮತ್ತು ಯುಎಸ್ ಇತರರೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಿದೆ.
400ಕ್ಕೂ ಅಧಿಕ ಮಂದಿ ಸಾವು
ಸೂಡಾನ್ ಸಂಘರ್ಷದಲ್ಲಿ 400 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಹಿಂಸಾಚಾರದಲ್ಲಿ ಸಿಲುಕಿರುವ ಮಂದಿಯ ರಕ್ಷಣೆಗೆ ಬರದಿಂದ ಕಾರ್ಯ ಸಾಗಿದೆ. ಎಲ್ಲಾ ವಿದೇಶಿ ವಿಮಾನಗಳಿಗಾಗಿ ಸುಡಾನ್ ವಾಯುಪ್ರದೇಶವನ್ನು ಪ್ರಸ್ತುತ ಮುಚ್ಚಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಭೂಪ್ರದೇಶದ ಚಲನೆ ಅಪಾಯಗಳು ಮತ್ತು ವ್ಯವಸ್ಥಾಪನಾ ಸವಾಲುಗಳನ್ನು ಹೊಂದಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.