ಸಂಕ್ರಾಂತಿಗೆ ’ಕಬ್ಜ’ ಟೀಸರ್

ಬೆಂಗಳೂರು, ಜ.೧೨- ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸುತ್ತಿರುವ “ಕಬ್ಜ “ಚಿತ್ರದ ಟೀಸರ್ ಸಂಕ್ರಾಂತಿ ಹಬ್ಬದಂದು ಬಿಡುಗಡೆಯಾಗಲಿದೆ.
ಸುಗ್ಗಿ ಹಬ್ಬ ಸಂಕ್ರಾಂತಿ ಸಮೀಪದಲ್ಲಿದ್ದು, ಆ ಸುದಿನದಂದು ’ಕಬ್ಜ’ ಚಿತ್ರತಂಡ ಸಿನಿರಸಿಕರಿಗೆ ಅಚ್ಚರಿ ನೀಡಲುಮುಂದಾಗಿದೆ. ಸಂಕ್ರಾಂತಿ ಹಬ್ಬದ ದಿನ ಬೆ .೧೦ಕ್ಕೆ ಆ ಕುತೂಹಲ ಅನಾವರಣ ಗೊಳ್ಳಲಿದೆ
ಆರ್ ಚಂದ್ರು ನಿರ್ದೇಶಿಸುತ್ತಿದ್ದಾರೆ .ಈಗಾಗಲೇ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾಗಳಾದ ಕೆ.ಜಿ.ಎಫ್ ೨ ಹಾಗೂ ಕಬ್ಜ ಚಿತ್ರಗಳ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬೆಂಗಳೂರು, ಹೈದರಾಬಾದ್ ಮುಂತಾದ ಕಡೆ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಮಾಸಾಂತ್ಯಕ್ಕೆ ಮುಂದಿನ ಹಂತದ ಚಿತ್ರೀಕರಣ ಆರಂಭವಾಗಲಿದೆ.
ಉಪೇಂದ್ರ ಚಿತ್ರಕ್ಕಾಗಿ ನಾಲ್ಕು ಘಂಟೆಗೂ ಹೆಚ್ಚು ಕಾಲ ವ್ಯಾಯಾಮ ಮಾಡಿ, ಚಿತ್ರೀಕರಣಕ್ಕೆ ಬೇಕಾದ ಹಾಗೆ ಸಜ್ಜಾಗಿ, ಬಹಳ ಸುಂದರ ವಾಗಿ ಕಾಣಿಸಿಕೊಂಡಿದ್ದಾರೆ.
ಅಭಿಮಾನಿಗಳ ನಿರೀಕ್ಷೆಗೆ ತಕ್ಕ ಹಾಗೆ ಕಬ್ಜ ಮೂಡಿಬರುತ್ತಿದೆ ಎನ್ನುತ್ತಾರೆ ಆರ್ ಚಂದ್ರು.
ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ಅವರೆ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ.
ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ..
ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್,ವಿಜಯ್ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಾಮರಾಜನ್, ಜಗಪತಿ ಬಾಬು, ರಾಹುಲ್ ಜಗತಪ್,ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದ ವರು ಚಿತ್ರದ ತಾರಾಬಳಗದಲ್ಲಿದ್ದಾರೆ.