
ಚನ್ನಪಟ್ಟಣ, ಜ.6- ಸಕ್ರಾಂತಿ ಬಳಿಕ ರಾಜ್ಯದಲ್ಲಿ ಹೊಸ ರಾಜಕೀಯಕ್ಕೆ ಚಾಲನೆ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಹೇಳಿದ್ದಾರೆ.
ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗುವುದನ್ನು ನೀವೇ ನೋಡಿ, ಯಾರು ಎಲ್ಲಿ ಇರುತ್ತಾರೆ ಎನ್ನುವುದು ತಿಳಿಯಲಿದೆ ಎಂದು ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾದ ಮತ್ತು ಪರಾಭವಗೊಂಡ ಜೆಡಿಎಸ್ ಅಭಿಮಾನಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜೆಡಿಎಸ್ ಪಕ್ಷಕ್ಕೆ ಬನ್ನಿ ಎಂದು ತಾವು ಯಾರ ಮನೆಗೂ ಹೋಗಿ ಯಾವ ನಾಯಕರನ್ನು ಆಹ್ವಾನಿಸುವುದಿಲ್ಲ ಬದಲಾಗಿ ಪಕ್ಷದ ತತ್ವ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಬಂದರೆ ಅವರನ್ನು ಸ್ವಾಗತಿಸುವುದಾಗಿ ಹೇಳಿದರು.
ರಾಜ್ಯದಲ್ಲಿ ಜೆಡಿಎಸ್ ಶಾಸಕರು ಮತ್ತು ಮುಖಂಡರು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಆದರೆ ತಾವು ಆ ರೀತಿಯ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಚುನಾಯಿತ ಸದಸ್ಯರ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಮ್ಮ ಪಕ್ಷಕ್ಕೆ ಸೆಳೆಯುವ ಕೆಲಸ ನಡೆಯುತ್ತಿದೆ .ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅವರು ಹೇಳಿದರು.
ಪಂಚಾಯಿತಿ ಚುನಾವಣೆ ಚಿಹ್ನೆ ರಹಿತವಾಗಿ ನಡೆಯುತ್ತಿದೆ ಆದರೆ ಇತ್ತೀಚೆಗೆ ಪಕ್ಷದ ಹೆಸರಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿದ ಅವರು ಜೆಡಿಎಸ್ ಅಭಿಮಾನಿಗಳು ಗೆಲುವು ಸಾಧಿಸಿದ ಕಡೆ ತಮ್ಮ ಪಕ್ಷಕ್ಕೆ ಸೆಳೆದು ಅಧಿಕಾರ ಹಿಡಿಯುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಗೆ ಭವಿಷ್ಯವಿಲ್ಲ ಎಂದು ಹೇಳಿದರು
ತಿರುಗೇಟು:
ಗ್ರಾಮ ಪಂಚಾಯಿತಿ ಚುನಾವಣೆಗೆ ಮುನ್ನ ಜೆಡಿಎಸ್ ಬೆಂಬಲಿತ ಕಾರ್ಯಕರ್ತರು ಹೆಚ್ಚಿನ ಸ್ಥಾನ ಗೆಲ್ಲುವುದಿಲ್ಲ ನಾವೇ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಎಂದು ಕೆಲವರು ಹೇಳುತ್ತಿದ್ದರು.ಇದೀಗ ಚನ್ನಪಟ್ಟಣದ ಜನ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಪರೋಕ್ಷವಾಗಿ ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಗೆ ತಿರುಗೇಟು ನೀಡಿದ್ದಾರೆ