ಸಂಗಮೇಶ ಬಾವಿದೊಡ್ಡಿಗೆ ಗೌರವ ಸನ್ಮಾನ

ಬೀದರ್,ಡಿ 4: ನಗರದ ಡಾ.ಚನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಸಹಯೋಗದಲ್ಲಿ ವಿಶ್ವ ವಿಕಲಚೇತನ ದಿನಾಚರಣೆ ಜರುಗಿತು.
ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿಗ್ರಹ ಸಂಘಟನೆ ಜಿಲ್ಲಾಧ್ಯಕ್ಷ ಸಂಗಮೇಶ ಬಾವಿದೊಡ್ಡಿ ಅವರಿಗೆ ಈ ಸಂದರ್ಭದಲ್ಲಿ ವಿಶೇಷ ಸನ್ಮಾನ ಮಾಡಲಾಯಿತು. ಕೋವಿಡ್ ಸಂದರ್ಭದಲ್ಲಿ ಬಡ ಜನರಿಗೆ ಆಹಾರದ ಕಿಟ್ ವಿತರಿಸುವ ಮೂಲಕ ಆಸರೆಯಾದ ಹಿನ್ನೆಲೆ ಈ ಸನ್ಮಾನ ಮಾಡಲಾಯಿತು.