ಸಂಗಾತಿ ಕೊಂದು ಶವ ತುಂಡರಿಸಿ ಕ್ರೌರ್ಯ

ಮುಂಬೈ(ಮಹಾರಾಷ್ಟ್ರ),ಜೂ.೮-ದೇಶಾದ್ಯಂತ ಭಾರಿ ತಲ್ಲಣ ಸೃಷ್ಟಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಭಯಾನಕ ಹತ್ಯೆ ಇನ್ನೂ ಜನಮಾನಸದಿಂದ ಮಾಸಿಲ್ಲ, ಇದರ ಬೆನ್ನಲ್ಲೆ ಮುಂಬೈನ ಥಾಣೆ ಜಿಲ್ಲೆಯಲ್ಲಿ ಮಹಿಳೆಯನ್ನು ಕೊಂದು ಮೃತದೇಹವನ್ನು ೧೩ ತುಂಡುಗಳಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಕೊಲೆಗಡುಕ ಬೇಯಿಸಿರುವ ಅಮಾನುಷ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ.ಸಹಜೀವನ ನಡೆಸುತ್ತಿದ್ದ ಮಹಿಳೆಯನ್ನು ಕೊಲೆ ಮಾಡಿದ್ದೇ ಅಲ್ಲದೆ ಆಕೆಯ ಶವವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿ ಆರೋಪಿ ಕ್ರೌರ್ಯ ಮೆರೆದಿದ್ದಾನೆ. ಇದೇ ರೀತಿ ಕೆಲ ತಿಂಗಳುಗಳ ಹಿಂದೆ ಸಹಜೀವನ ನಡೆಸುತ್ತಿದ್ದ ಶ್ರದ್ಧಾ ವಾಕರ್‌ಳನ್ನು ಆಕೆಯ ಪ್ರೀತಿಸುತ್ತಿದ್ದ ಅಫ್ತಾಬ್ ಅಮೀನ್ ಪೂನಾವಾಲಾ ಕೊಲೆ ಮಾಡಿ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕಾಡಿನಲ್ಲಿ ಬಿಸಾಡಿದ್ದ ಘಟನೆಗಿಂತ ಈ ಭಯಾನಕ ಕೃತ್ಯ ನಡೆದಿದ್ದು, ಪೊಲೀಸ್ ಇಲಾಖೆಗೆ ನಡುಕ ಹುಟ್ಟಿಸಿದೆ.ಮೀರಾ ಭಾಯಂದರ್ ಪ್ರದೇಶದಲ್ಲಿನ ಅಪಾರ್ಟ್‌ಮೆಂಟ್‌ವೊಂದರ ಏಳನೇ ಮಹಡಿಯಲ್ಲಿರುವ ಫ್ಲಾಟ್‌ನಲ್ಲಿ ಹಲವಾರು ತುಂಡುಗಳಾಗಿ ಕತ್ತರಿಸಿ ಕುಕ್ಕರ್‌ನಲ್ಲಿ ಬೇಯಿಸಿರುವ ೩೬ ವರ್ಷದ ಮಹಿಳೆಯ ಶವವನ್ನು ಪೊಲೀಸರು ಪತ್ತೆ ಮಾಡಿದ್ದು ಈ ಕೃತ್ಯವು ರಾಜ್ಯವಲ್ಲದೇ ದೇಶದ ಜನತೆಯನ್ನು ತಲ್ಲಣಗೊಳಿಸಿದೆ.ಮೀರಾ ಭಾಯಂದರ್ ಪ್ರದೇಶದ ಸರಸ್ವತಿ ವೈದ್ಯ ಭಯಾನಕವಾಗಿ ಕೊಲೆಯಾದ ಮಹಿಳೆಯಾಗಿದ್ದಾರೆ. ಕೊಲೆಯಾದ ಮಹಿಳೆಯು ೫೬ ವರ್ಷದ ಮನೋಜ್ ಸಹಾನಿ ಅವರೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದು, ಕಳೆದ ಮೂರು ವರ್ಷಗಳಿಂದ ಮೀರಾ ಭಾಯಂದರ್ ಪ್ರದೇಶದ ಫ್ಲಾಟ್‌ನಲ್ಲಿ ನೆಲೆಸಿದ್ದರು.ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಅಪಾರ್ಟ್‌ಮೆಂಟ್‌ನಲ್ಲಿದ್ದ ನೆರೆಹೊರೆಯವರು ನಯಾ ನಗರ ಠಾಣೆಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ.
ನಾಲ್ಕು ದಿನಗಳ ದಿನಗಳ ಹಿಂದೆ ಸರಸ್ವತಿಯನ್ನು ಕೊಂದಿದ್ದ ಆರೋಪಿ ಮನೋಜ್, ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಲು ಮರ ಕಡಿಯುವ ಯಂತ್ರವನ್ನು ಖರೀದಿಸಿ, ಈ ಪೈಶಾಚಿಕ ಕೃತ್ಯವೆಸಗಿದ್ದಾನೆ.ಅದರಿಂದ ಮೃತದೇಹವನ್ನು ೧೩ ಕ್ಕೂ ಹೆಚ್ಚು ತುಂಡುಗಳನ್ನು ಮಾಡಿ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ, ಹೊರಗೆ ಎಸೆಯುವ ಉದ್ದೇಶದಿಂದ ಪ್ಲಾಸ್ಟಿಕ್ ಚೀಲಗಳಲ್ಲಿ ಸುತ್ತಿ ಇಟ್ಟಿದ್ದ. ಮಹಿಳೆಯ ಮೃತ ದೇಹದ ೧೨-೧೩ ತುಂಡುಗಳು ಸ್ಥಳದಿಂದ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳೀಯರು ದೂರು ನೀಡುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ತಂಡ ಸ್ಥಳಕ್ಕೆ ದೌಡಾಯಿಸಿತು. ಈ ವೇಳೆ, ಮಹಿಳೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿರುವುದು ಕಂಡು ಪೊಲೀಸರು ಬೆಚ್ಚಿ ಬಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.ಪ್ರಾಥಮಿಕ ತನಿಖೆಯ ಪ್ರಕಾರ, ಶಂಕಿತ ವ್ಯಕ್ತಿಯೊಬ್ಬ ಗಲಾಟೆ ಮಾಡಿಕೊಂಡು ಆಕೆಯನ್ನು ಕೊಲೆ ಮಾಡಿದ್ದಾನೆ ಮತ್ತು ಇನ್ನೊಬ್ಬ ಬುಧವಾರ ಸಂಜೆಯವರೆಗೂ ಆಕೆಯ ಮೃತದೇಹವನ್ನು ಮುಚ್ಚಿಡಲು ಸಹಾಯ ಮಾಡಿದ್ದಾನೆ ಎಂದು ತಿಳಿದು ಬಂದಿದೆ.ಆದರೆ, ಕೊಲೆ ಏಕೆ ಮಾಡಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ” ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಪೊಲೀಸರು ಮೀರಾ ರೋಡ್ ಪ್ರದೇಶದಲ್ಲಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ತುಂಡಾಗಿ ಕತ್ತರಿಸಿದ ಮಹಿಳೆಯ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಇಲ್ಲಿ ಜೋಡಿಯೊಂದು ಲಿವ್-ಇನ್ ಸಂಬಂಧದಲ್ಲಿ ವಾಸಿಸುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಮುಂಬೈನ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಜಯಂತ್ ಬಜ್ಬಲೆ ಹೇಳಿದ್ದಾರೆ.
ಶ್ರದ್ಧಾ ವಾಕರ್ ಹತ್ಯೆ ಕೇಸ್
ದೇಹ ೩೫ ತುಂಡು ಮಾಡಿ, ಮೂಳೆ ಗ್ರೈಂಡರ್‌ನಲ್ಲಿ ಪುಡಿ ಮಾಡಿದ್ದನಂತೆ ಅಫ್ತಾಬ್ ಇನ್ನು ಕಳೆದ ಮೇ ೧೮, ೨೦೨೨ ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶ್ರದ್ಧಾ ವಾಕರ್ ಎಂಬ ೨೭ ವರ್ಷದ ಯುವತಿಯನ್ನು ಆಕೆಯ ೨೮ ವರ್ಷದ ಗೆಳೆಯ ಆಫ್ತಾಬ್ ಅಮೀನ್ ಪೂನಾವಾಲಾ ಕೊಲೆ ಮಾಡಿ ದೇಹವನ್ನು ತುಂಡು ತುಂಡುಗಳಾಗಿ ಕತ್ತರಿಸಿದ್ದ.