ಸಂಗೀತ ಪದವೀಧರರ ನಿಯೋಗ ಬೆಂಗಳೂರಿಗೆ

ಕಲಬುರಗಿ,ಜು.15-ನವ ಕರ್ನಾಟಕ ಸಂಗೀತ ಪದವೀಧರರ ಸಂಘದ ನಿಯೋಗ ಬೆಂಗಳೂರಿಗೆ ತೆರಳಿ ಜು.18 ರಂದು ಮಂಗಳವಾರದಂದು ಶಿಕ್ಷಣ ಸಚಿವರಿಗೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಭೇಟಿಯಾಗಿ ಸಂಗೀತ ಶಿಕ್ಷಕರ ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಸಂಘದ ರಾಜ್ಯ ಅಧ್ಯಕ್ಷ ಬಂಡಯ್ಯ ಹಿರೇಮಠ ಸುಂಟನೂರ ತಿಳಿಸಿದ್ದಾರೆ.
ಸಂಗೀತ ಶಿಕ್ಷಕರ ನೇಮಕಾತಿ ಮಾಡುವಂತೆ ಮನವಿ ಏನಾದರೂ ಸಲ್ಲಿಸಿದರೆ ಸಂಗೀತ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವರು ಈಗಾಗಲೆ ಭರವಸೆ ನೀಡಿದ್ದಾರೆ. ಕಳೆದ ಹನ್ನೆರಡು ವರ್ಷಗಳಿಂದ ಸಂಗೀತ ಶಿಕ್ಷಕರ ನೇಮಕಾತಿ ಆಗದ ಕಾರಣ ರಾಜ್ಯದ ಎಲ್ಲಾ ಸಂಗೀತ ಪದವೀಧರರ ಸೇರಿ ಸಂಗೀತ ಶಿಕ್ಷಕರ ನೇಮಕಾತಿ ಮಾಡುವಂತೆ ಅಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.