ಸಂಗೀತ ವಿದ್ವಾನ್ ತಿಪ್ಪೇಸ್ವಾಮಿಯವರಿಗೆ ಸನ್ಮಾನ


ಹಿರಿಯೂರಿನ ಶ್ರೀಏಕನಾಥೇಶ್ವರಿ ಸಂಗೀತ ವಿದ್ಯಾಲಯದ ಪ್ರಾಂಶುಪಾಲರಾದ ಸಂಗೀತ ವಿದ್ವಾನ್ ಆರ್.ತಿಪ್ಪೇಸ್ವಾಮಿಯವರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದು ಅವರಿಗೆ ಚಿತ್ರದುರ್ಗದ ಅಂಜನಾ ನೃತ್ಯ ಕಲಾ ಕೇಂದ್ರದ ವತಿಯಿಂದ ಸನ್ಮಾನಿಸಲಾಯಿತು. ಸಂಸ್ಕಾರ ಭಾರತಿ ಪ್ರಮುಖರಾದ ರಾಜೀವಲೋಚನ, ಕಲಾ ಕೇಂದ್ರದ ಪ್ರಾಂಶುಪಾಲರಾದ ವಿದ್ವಾನ್ ಸಿ.ಆರ್.ಶಿವಪ್ರಕಾಶ್, ಕಲಾವಿದೆ ನಂದಿನ ಶಿವಪ್ರಕಾಶ್ ಮತ್ತಿತರೆ ಗಣ್ಯರು ಉಪಸ್ಥಿತರಿದ್ದರು.