ಸಂಗೀತ ಹೃದಯದ ಭಾಷೆ

ಕಲಬುರಗಿ.ನ.17:ಸಂಗೀತ ಹೃದಯದ ಭಾಷೆ, ಪ್ರಕೃತಿಯಲ್ಲಿ ಪ್ರತಿಯೊಂದಕ್ಕೂ ಒಂದು ಲಯವಿದೆ. ಎಲ್ಲವೂ ನೃತ್ಯಮಯ ಎಂದು ಖ್ಯಾತ ಸಂಗೀತ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಬಾಬು ಪದ್ಮನಾಭ ಹೇಳಿದರು.
ನಗರದ ರಾಮ ಮಂದಿರ ಹತ್ತಿರವಿರುವ ವಿವೇಕಾನಂದ ವಿದ್ಯಾ ನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಂಗೀತದ ಮಹತ್ವ ಹಾಗೂ ಸಂಗೀತದಿಂದ ಮಾನಸಿಕ ಆರೋಗ್ಯ ವೃದ್ಧಿಸಿಕೊಳ್ಳುವ ಕುರಿತು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಗೀತ ನಿರ್ದೇಶಕ ಬಾಪು ಪದ್ಮನಾಭ ಆಗಮಿಸಿ, ವಿದ್ಯಾರ್ಥಿಗಳಿಗೆ ಜೀವನದ ಮೌಲಗಳನ್ನು ಕುರಿತು ಮಾತನಾಡಿದರು.
ನಂತರ ಕೊಳಲು ವಾದನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಇವರಿಗೆ ರಮಾಕಾಂತ ರಾವುತ್ ತಬಲಾ ಸಾಥ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುವರ್ಣ ಭಗವತಿ ಕಲಾವಿದರನ್ನು ಸನ್ಮಾನಿಸಿದರು. ಶಾಲೆಯ ಪ್ರಾಂಶುಪಾಲ ಸಿದ್ದಪ್ಪ ಭಗವತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಧ್ಯಾನದೀಪ ಯೋಗ ಮತ್ತು ಆರೋಗ್ಯ ಕೇಂದ್ರದ ಮುಖ್ಯಸ್ಥರಾದ ಡಾ. ದೀಪಾ ಹಜೇರಿ , ಶರಣ್ ರೆಡ್ಡಿ, ಶ್ರೀದೇವಿ ಪನಶೆಟ್ಟಿ ಉಪಸ್ಥಿತರಿದ್ದರು.