ಸಂಗೊಳ್ಳಿ ರಾಯಣ್ಣನ ಪುಣ್ಯತಿಥಿ ಆಚರಣೆ


ಚನ್ನಮ್ಮನ ಕಿತ್ತೂರು,ಜ. 28: ಪಂಚಸೇನೆ ಹಾಗೂ ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ಯುವ ಸಂಘಟನೆ ವತಿಯಿಂದ ರಾಷ್ಟ್ರೀಯ ಹೆದ್ದಾರಿ 4ರ ಪಕ್ಕ ರಾಣಿ ಚನ್ನಮ್ಮಾಜಿ ಸರ್ಕಲ್ಲಿನಲ್ಲಿ ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣನ 193 ನೇ ಪುಣ್ಯತಿಥಿ ಅದ್ದೂರಿಯಿಂದ ಆಚರಿಸಲಾಯಿತು.
ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ. ನಂತರ ಕಿತ್ತೂರು ರಾಣಿ ಚನ್ನಮ್ಮ, ಅಮಟೂರು ಬಾಳಪ್ಪ ಸೇರಿದಂತೆ ರಾಯಣ್ಣನ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಯಿತು.
ಈ ವೇಳೆ ಪಂಚಸೇನೆಯ ಬೆಳಗಾವಿ ಜಿಲ್ಲಾಧ್ಯಕ್ಷ ರಾಮನಗೌಡ ಪಾಟೀಲ, ಉಪಾಧ್ಯಕ್ಷ ಕಿರಣ ವಾಳದ, ಕ್ರಾಂತಿವೀರ ಶೂರ ಸಂಗೊಳ್ಳಿ ರಾಯಣ್ಣ ಯುವ ಸಂಘಟನೆ ರಾಜ್ಯಾಧ್ಯಕ್ಷ ಮಹಾಂತೇಶ ಕರಬಸನ್ನವರ, ಕಾನಿಪ ಧ್ವನಿ ಸಂಘದ ಅಧ್ಯಕ್ಷ ಬಸವರಾಜ ಚಿನಗುಡಿ, ಬಸವರಾಜ ದಳವಾಯಿ ಸೇರಿದಂತೆ ಇತರರಿದ್ದರು.