ಸಂಘಟನೆ ಬಲವರ್ಧನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಿ

ಬೀದರ್: ಸೆ.7:ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಕ್ಷದ ಸಂಘಟನೆ ಬಲವರ್ಧನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸಲಹೆ ಮಾಡಿದರು.

ಇಲ್ಲಿಯ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಆಯೋಜಿಸಿದ್ದ ಯುವ ಮೋರ್ಚಾ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

ಬಿಜೆಪಿ ಕಲಬುರಗಿ ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಸಸಿಗೆ ನೀರೆರೆದು ಸಭೆಯನ್ನು ಉದ್ಘಾಟಿಸಿದರು. ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಶೇಕಾಪುರ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಕಲಬುರಗಿ ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಸೂರ್ಯಕಾಂತ ಧೋನಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಕುಂಬಾರ, ಅರಹಂತ ಸಾವಳೆ ಮಾತನಾಡಿದರು.

ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜನಾರ್ಧನ್ ರೆಡ್ಡಿ ನಿರೂಪಿಸಿದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಸ್ವಾಗತಿಸಿದರು. ಯುವ ಮೋರ್ಚಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.