ಸಂಘಟಿತ ಪ್ರಚಾರದ ಫಲ: ಮಂಠಾಳಕರ್

ಬೀದರ:ಮೇ.3: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಗೆಲುವಿನಲ್ಲಿ ಬಿಜೆಪಿ ಸರ್ಕಾರಗಳ ಸಾಧನೆ ಹಾಗೂ ಪಕ್ಷದ ನಾಯಕರ ಸಂಘಟಿತ ಪ್ರಚಾರ ಪ್ರಮುಖ ಪಾತ್ರ ವಹಿಸಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ಹೇಳಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಮುಖ್ಯಮಂತ್ರಿ, ಸಚಿವರು, ಸಂಸದರು, ಜನಪ್ರತಿನಿಧಿಗಳು, ಚುನಾವಣಾ ಉಸ್ತುವಾರಿಗಳು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದರು. ಸರ್ಕಾರದ ಸಾಧನೆಗಳು ಹಾಗೂ ಜನಪರ ಕಾರ್ಯ ಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿದ್ದರು ಎಂದು ತಿಳಿಸಿದ್ದಾರೆ.

ಪಕ್ಷದ ಸಂಘಟಿತ ಶ್ರಮವು ಮತದಾರರ ಮನಸ್ಸು ಬದಲಾಗುವಂತೆ ಮಾಡಿತು. ಉಪ ಚುನಾವಣೆಯಲ್ಲಿನ ಗೆಲುವು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಯೋಜನೆಗಳಿಗೆ ದೊರೆತ ಜನ ಮನ್ನಣೆಯಾಗಿದೆ ಎಂದು ಹೇಳಿದ್ದಾರೆ.