ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ


ಸಂಜೆವಾಣಿ ವಾರ್ತೆ
ದಾವಣಗೆರೆ.ಜ.೧೪: ಕರ್ನಾಟಕ ರಾಜ್ಯ ಸರ್ಕಾರಿ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳ ಸಂಘ ಬೆಂಗಳೂರು, ಜಿಲ್ಲಾ ಘಟಕ ದಾವಣಗೆರೆ ವತಿಯಿಂದ ನಡೆದ ಐದನೇ ವರ್ಷದ ೨೦೨೪ನೇ ಸಾಲಿನ ಸಂಘದ ದಿನದರ್ಶಿಕೆ ಬಿಡುಗಡೆ ಹಾಗೂ ಸಂಘದ ಸದಸ್ಯರ ಮಕ್ಕಳಿಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೆರವೇರಿಸಲಾಯಿತು.  ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಸ್. ಷಣ್ಮುಖಪ್ಪ, ಅನುಷ್ಠಾನ ಅಧಿಕಾರಿಗಳಾದ ಡಾ. ಪಿ.ಡಿ. ಮುರಳಿ, ಡಾ. ಜಿ ಡಿ ರಾಘವನ್, ಡಾ. ಮಂಜುನಾಥ್ ಎಲ್ ಪಾಟೀಲ್, ಡಾ. ಎಂ. ರೇಣುಕಾರಾಧ್ಯ, ಡಾ. ದೇವರಾಜ್ ಹಾಗೂ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ. ಟಿ. ಮಹೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಯು ನಿರಂಜನ್, ಜಿಲ್ಲಾ ಖಜಾಂಚಿ ವಿ. ಆರ್. ಸಂತೋಷ್ ಕುಮಾರ್, ಗೌರವಾಧ್ಯಕ್ಷ ಹನುಮಂತಪ್ಪ, ಜಿ.ಪಿ ರವಿ, ಕರಿಬಸವರಾಜ್, ಎಸ್. ಶಾಕಿರ್ ಅಲಿ ಮತ್ತಿತರರು ಪಾಲ್ಗೊಂಡಿದ್ದರು