ಸಂಘ ಪರವಾರ ನಿಷೇಧಿಸುವುದಾಗಿ ಹೇಳಿಲ್ಲ

ಬೆಂಗಳೂರು,ಮೇ೨೭:ಸಂಘ ಪರಿವಾರ ನಿಷೇಧಿಸುವುದಾಗಿ ನಾವು ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಸಂಘಟನೆ ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಕದಡುವ ಕೆಲಸ ಮಾಡಿದರೆ ಅಂತಹ ಸಂಘಟನೆಗಳ ವಿರುದ್ಧ ಕಠಿಣಕ್ರಮ ಕೈಗೊಳ್ಳುತ್ತೇವೆ ಎಂದ ಹೇಳಿದರು.ದಿ. ಪ್ರಧಾನಿ ಜವಹರಲಾಲ್ ನೆಹರೂರವರ ಪುಣ್ಯ ಸ್ಮರಣೆಯ ದಿನವಾದ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರವನ್ನು ನಿಷೇಧಿಸುವಂತೆ ನಾವು ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ತಾಕತ್ತಿದ್ದರೆ ಆರ್‌ಎಸ್‌ಎಸ್‌ನ್ನು ನಿಷೇಧಿಸಲಿ ಎಂದು ಸವಾಲು ಹಾಕುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ನಾವ್ಯಾರು ಆ ರೀತಿ ಹೇಳಿಲ್ಲ. ಆದರೆ, ಯಾವುದೇ ಸಂಘಟನೆ ಶಾಂತಿ ಮತ್ತು ಸಾಮರಸ್ಯವನ್ನು ಕದಡುವ ಕೆಲಸ ಮಾಡಿದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದರು.