ಸಂಚಾರಕ್ಕೆ ತೊಂದರೆಯಾದ ಸ್ಥಳಕ್ಕೆ ಶಾಸಕ ದೇವಾನಂದ ಭೇಟಿ

ವಿಜಯಪುರ:ಆ.3: ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ರೇಲ್ವೆ ಸ್ಟೇಷನ್ ಬಡಾವಣೆಯ ಪ್ರಮುಖವಾದ ಮುಖ್ಯ ರಸ್ತೆಗಳಲ್ಲಿ ಮಳೆ ನೀರು ತುಂಬಿಕೊಂಡು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗಿರುವ ಸ್ಥಳಕ್ಕೆ ಶಾಸಕ ಡಾ.ದೇವಾನಂದ ಚವ್ಹಾಣ ರವರು ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಈ ದಿನ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ನಮ್ಮ ಮತಕ್ಷೇತ್ರ ವ್ಯಾಪ್ತಿಯಲ್ಲಿ ಆದ ಹಾನಿಯನ್ನು ತಕ್ಷಣವೇ ಗುರುತಿಸಿ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ತಕ್ಷಣವೇ ಕ್ರಮ ಕೈಕೊಳ್ಳಬೇಕು. ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಕಾಮಗಾರಿಗಳನ್ನು ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತ ಶ್ರೀ, ವಿಜಯಕುಮಾರ ಮೆಕ್ಕಳಕಿ, ಕೆ.ಆರ್.ಐ.ಡಿ.ಎಲ್. ಕಾರ್ಯಪಾಲಕ ಅಭಿಯಂತರ ತಿಮ್ಮರಾಜಪ್ಪ ಸಹಾಯಕ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ ಮತ್ತಿಕಟ್ಟಿ ರವರು, ಮಹಾನಗರ ಪಾಲಿಕೆಯ ಅಧಿಕಾರಿಗಳು, ಮುಖಂಡರಾದ ಫಯಾಜ್, ಗುಲಾಬ ಚವ್ಹಾಣ, ಶಿವಾನಂದ ಹಿರೇಕುರುಬರ, ಶಕ್ತಿಕುಮಾರ ಉಕುಮನಾಳ, ರವಿ ಚವ್ಹಾಣ, ಆರಿಫ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.