ಸಂಚಾರ ನಿಯಮಗಳನ್ನು ಪಾಲಿಸುವ ಕುರಿತು ಪ್ರತಿಯೊಬ್ಬರೂ ಆತ್ಮ ಶೋಧನೆ ಮಾಡಿಕೊಳ್ಳಬೇಕು : ವಿಜಯಕುಮಾರ ಪಿ.ಆಯ್.

ಬೀದರ:ಜು.14: ನಗರದ ಹೆಚ್.ಕೆ.ಇ ಸಂಸ್ಥೆಯ ಬಿ.ವಿ.ಭೂಮರಡ್ಡಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸಂಚಾರ ಪೆÇೀಲಿಸ ಠಾಣೆ, ಎನ್. ಸಿ.ಸಿ, ಎನ್.ಎಸ್.ಎಸ್ ಹಾಗೂ ವಾಯ್.ಆರ್.ಸಿಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಮತ್ತು ಸಂಚಾರ ನಿಯಮಗಳ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾದ ಶ್ರೀ ವಿಜಯಕುಮಾರ.ಪಿ.ಆಯ್. ನೀರಿಕ್ಷಕರು ಮಹಿಳಾ ಪೆÇೀಲಿಸ ಠಾಣೆ ಬೀದರ ಅವರು ಮಾತನಾಡಿ ಸಂಚಾರ ನಿಯಮಗಳನ್ನು ಪಾಲಿಸುವ ಕುರಿತು ಪ್ರತಿಯೊಬ್ಬರೂ ಆತ್ಮ ಶೋಧನೆ ಮಾಡಿಕೊಳ್ಳಬೇಕು. ಇನ್ನೊಬ್ಬರ ಜೀವಕ್ಕೂ ಬೆಲೆ ಇದೆ ಎನ್ನುವ ವಾಸ್ತವವನ್ನು ಅರಿತುಕೊಂಡು ವಾಹನ ಚಲಾವಣೆ ಮಾಡಬೇಕು. ಅನೇಕ ಅಪಘಾತಗಳು ಮಾನವ ತಪ್ಪುಗಳಿಂದಲೇ ಆಗುತ್ತವೆ. ಅಮಾಯಕರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನು ಬೀದಿಪಾಲು ಮಾಡುತ್ತಾರೆ. ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು. ಎಲ್ಲಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಕುಡಿದು ವಾಹನ ಚಾಲನೆ ಮಾಡುವುದು, ಮೊಬೈಲ್‍ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಎಂದು ಸೂಚಿಸಿದರು.

ಎನ್. ಎಸ್.ಎಸ್ ಅಧಿಕಾರಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ದೀಪಾ ರಾಗಾರವರು ಮಾತನಾಡಿ ವಾಹನಗಳ ಸಂಖ್ಯೆ ಅಧಿಕಗೊಳ್ಳುತ್ತಿರುವಂತೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿವೆ. ಹೆತ್ತವರು ಮಕ್ಕಳಿಗೆ ವಾಹನ ಖರೀದಿಸಿ ಕೊಡುವಾಗ ಎಚ್ಚರಿಕೆ ವಹಿಸಬೇಕು. ಕಾನೂನು ಪಾಲನೆ ಕುರಿತು ಮನವರಿಕೆ ಮಾಡಿಕೊಡಬೇಕು. ಪ್ರತಿಯೊಬ್ಬರು ತನ್ನ ಮನೆಯಲ್ಲಿ ಸಂಚಾರ ನಿಯಮದ ಕುರಿತು ಅರಿವು ಮೂಡಿಸಿದರೆ, ಅಪಘಾತದ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಬಹುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಮೇಜರ್. ಡಾ ಪಿ. ವಿಠಲರೆಡ್ಡಿಯವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಚಾಲಕರು ರಸ್ತೆ ನಿಯಮಗಳನ್ನು ಹಾಗೂ ಸಂಚಾರ ಚಿಹ್ನೆಗಳನ್ನು ಚೆನ್ನಾಗಿ ಅರಿತುಕೊಳ್ಳಬೇಕು. ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯ ತೋರದೆ ನಿಯಮ ಪಾಲನೆ ಮಾಡಬೇಕು. ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಧರಿಸಿರಬೇಕು. ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದು ಹೇಳುತ್ತಾ ಇಂತಹ ಮೌಲ್ಯಯುತ ಕಾರ್ಯಕ್ರಮವನ್ನು ನಮ್ಮ ಮಹಾವಿದ್ಯಾಲಯದಲ್ಲಿ ಆಯೋಜಿಸಲು ಸಹಕರಿಸಿದ ಪೆÇೀಲಿಸ ಇಲಾಖೆಗೆ ಧನ್ಯವಾದಗಳು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ಸುರೇಶ ಭಾವಿಮನಿ ಪಿಎಸ್ ಐ. ಸಂಚಾರ ಪೆÇೀಲಿಸ ಠಾಣೆ, ಡಾ.ಬಬ್ರುವಾಹನ ಎನ್.ಎಸ್.ಎಸ್. ಅಧಿಕಾರಿ ‘ಬ’ ಘಟಕ, ಪೆÇ್ರೀ. ರಾಯಕೊಡೆ, ಪೆÇ್ರೀ. ಬಸವರಾಜ ಬಿರಾದರ ಪೆÇೀಲಿಸ ಇಲಾಖೆಯ ಸತೀಶ ರಮಖಾನೆ, ಅವಿನಾಶ ಭಾವಿಕಟ್ಟಿ, ಸಂಜೀವಕುಮಾರ ಚಿಕಬಸೆ ಉಪಸ್ಥಿತರಿದ್ದರು. ಎನ್.ಸಿ.ಸಿ ಅಧಿಕಾರಿ ಶ್ರೀ ಮಾರುತಿ.ಬಿ ಯವರು ನಿರೂಪಿಸಿದರೆ, ವಾಯ್ ಆರ್.ಸಿ ಅಧಿಕಾರಿ ಡಾ. ಹಣಮಂತಪ್ಪಾ ಸೆಡಂಕರವರು ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪದವಿ ಮತ್ತು ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಜರಿದ್ದರು.