ಸಂಜೀವರಾಯನಕೋಟೆಯಲ್ಲಿ ಅಂಬೇಡ್ಕರ್ ಜಯಂತಿ


 ಬಳ್ಳಾರಿ, ಏ.14 : ಸ್ವಾತಂತ್ರ್ಯ, ಸಮಾನತೆ,ಭ್ರಾತೃತ್ವ ಹಾಗೂ ಭಾವೈಕ್ಯತೆಯಿಂದ ಬಾಳಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ಅವರು ಇಂದು ತಾಲೂಕಿನ ಸಂಜೀವರಾಯನಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತಿಯಲ್ಲಿ ಪಾಲ್ಗೊಂಡು  ಮಾತನಾಡಿದರು.
ಪ್ರತಿಭಾವಂತ ವಿದ್ಯಾರ್ಥಿಗಳಾದ ಜೆ.ಪಿ.ಶ್ರಾವಂತಿ,ಯು.ಎಸ್. ಶಾಂತಿ, ಕೆ.ಕೀರ್ತಿ, ಇಂದು ಹಾಗೂ ಇಂದ್ರ ಅವರಿಗೆ ಬಹುಮಾನ ವಿತರಿಸಲಾಯಿತು.
ಶಿಕ್ಷಕರಾದ ಮುನಾವರ ಸುಲ್ತಾನ,ಬಸವರಾಜ, ದಿಲ್ಷಾದ್ ಬೇಗಂ, ಮೋದಿನ್ ಸಾಬ್, ಚನ್ನಮ್ಮ, ಸುಮತಿ, ಸುಧಾ, ವೈಶಾಲಿ, ಶ್ವೇತಾ, ಉಮ್ಮೆಹಾನಿ, ಶಶಮ್ಮ ಹಾಗೂ ರಾಮಾಂಜಿನೇಯ ಮುಂತಾದವರು ಉಪಸ್ಥಿತರಿದ್ದರು.