ಸಂಜೀವರಾಯನಕೋಟೆ ಯಲ್ಲಿ
ವಿವೇಕಾನಂದ ಜಯಂತಿ‌


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜ.12:  ದೇಶದ ಪ್ರಗತಿ ವಿದ್ಯಾವಂತ ಹಾಗೂ ಯುವಸಮೂಹದ ಕ್ರಿಯಾಶೀಲ ಬದುಕಿನ ಮೇಲೆ ಆಧಾರವಾಗಿದೆಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ಅವರು ಇಂದು ತಾಲ್ಲೂಕಿನ ಸಂಜೀವರಾಯನಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವದಿನ ಹಾಗೂ ಸ್ವಾಮಿ ವಿವೇಕಾನಂದರ 160ನೇ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದರು.
ಅಮೇರಿಕಾದ ಚಿಕಾಗೋದಲ್ಲಿ 1893ರಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿ‌.  ಭಾರತದ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರ, ಸಂಪ್ರದಾಯ, ರೀತಿ ನೀತಿಗಳನ್ನು ಅವರ ಭಾಷಣದ ಮೂಲಕ ಪ್ರಪಂಚಕ್ಕೆ ಪರಿಚಯಿಸಿದರು.  ಅವರ  ಆದರ್ಶಗಳನ್ನು ಪಾಲಿಸೋಣ ಎಂದರು. ಶಾಲೆಯ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು.
ಶಿಕ್ಷಕರಾದ ದಿಲ್ಷಾದ್ ಬೇಗಂ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರೆ,ಬಸವರಾಜ ಪೂಜೆ ಸಲ್ಲಿಸಿದರು. ಏಳನೇ ತರಗತಿ ವಿದ್ಯಾರ್ಥಿ ಶೇಖರ್ ಭಾಷಣ ಮಾಡಿದರು.
ಶಿಕ್ಷಕರಾದ ಮುನಾವರ ಸುಲ್ತಾನ, ಮೋದಿನ್ ಸಾಬ್, ಚನ್ನಮ್ಮ, ಸುಮತಿ, ವೈಶಾಲಿ, ಶ್ವೇತಾ, ಉಮ್ಮೆಹಾನಿ, ಶಶಮ್ಮ ಹಾಗೂ ರಾಮಾಂಜಿನೇಯ ಮುಂತಾದವರು ಉಪಸ್ಥಿತರಿದ್ದರು.