ಸಂಜೆ ಮೀಸಲಾತಿ ಸಭೆ

ಹುಬ್ಬಳ್ಳಿ,ನ8: ಕುರುಬ ಸಮುದಾಯವನ್ನು ಎಸ್.ಟಿ ಮೀಸಲಾತಿಗೆ ಸೇರ್ಪಡೆ ಸಂಬಂಧಿಸಿದಂತೆ ಇಂದು ಸಂಜೆ 4 ಗಂಟೆಗೆ ಚಿಂತಕರು ಹಾಗೂ ಸಮಾಜದ ಪ್ರತಿನಿಧಿಗಳು ದುಂಡು ಮೇಜಿನ ಮಹಾ ಸಭೆಯನ್ನು ಧಾರವಾಡದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಧಾರವಾಡ ಮನಸೂರಿನ ಶ್ರೀ ಡಾ. ಬಸವರಾಜ ದೇವರು ಮಹಾಸ್ವಾಮಿಗಳು ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುರುಬ ಸಮುದಾಯದ ಎಸ್.ಟಿ ಮೀಸಲಾತಿಗೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎಸ್.ಟಿ ಮೀಸಲಾತಿ ನೀಡಿಲ್ಲ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ಶ್ರೀ ಕನಕದಾಸರ ಜಯಂತಿಯಂದು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಸಂಪುಟ ಸಭೆಯಲ್ಲಿ ಅನುಮೂದನೆ ಪಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಕ್ರಮವಹಿಸಿ ಘೋಷಿಸಬೇಕು ಎಂದರು.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಜಾರಿಯಿರುವ ಎಸ್.ಟಿ ಮೀಸಲಾತಿ ಸಮರ್ಪಕವಾಗಿ ಅನುಷ್ಠಾನಕ್ಕಾಗಿ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದ ಅವರು ಕುರುಬರನ್ನು ಎಸ್.ಟಿ ಗೆ ಸೇರ್ಪಡೆ
ಮಾಡದಿದ್ದಲ್ಲಿ ಶ್ರೀ ಕನಕದಾಸರ ಜಯಂತಿ ಮರುದಿನವೇ ಸರ್ಕಾರದ ವಿರುದ್ಧ ವಿವಿಧ ತೆರನಾದ ಚಳುವಳಿ ಆರಂಭಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕುರುಬ ಸಮಾಜದ ಮುಖಂಡರಾದ ಶಿವಾನಂದ ಮುತ್ತಣ್ಣವರ,
ಬಸವರಾಜ ಕಟಗಿ, ಮಲ್ಲಿಕಾರ್ಜುನ ತಾಲೂರ, ರಮೇಶ ನಲವಡಿ, ಸಂಜು ಗೌಡರ ಉಪಸ್ಥಿತರಿದ್ದರು.