ಸಂಜೆ ರಸಮಂಜರಿ ಕಾರ್ಯಕ್ರಮ

ರಾಮನಗರ, ಜು. ೧೮: ನಗರದ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಐತಿಹಾಸಿಕ ಕರಗ ಮಹೋತ್ಸವದ ಅಂಗವಾಗಿ ಅರಳೀಮರ ವೃತ್ತದಲ್ಲಿ ಸಂಜೆ ರಸಮಂಜರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶ್ರೀ ಚಾಮುಂಡೇಶ್ವರಿ ಯುವ ಸೇವಾ ಸಮಿತಿ ಗೌರವಾಧ್ಯಕ್ಷ ಸಿಎನ್ ಆರ್ ವೆಂಕಟೇಶ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨ ವರ್ಷಗಳಿಂದ ಕೊವಿಡ್ ಕಾರಣದಿಂದಾಗಿ ಕಾರ್ಯಕ್ರಮ ಆಯೋಜಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿ ಚಲನಚಿತ್ರ ಹಿನ್ನೆಲೆ ಗಾಯಕ ನವೀನ್ ಸಜ್ಜು ತಂಡ ರಸಮಂಜರಿ ಕಾರ್ಯಕ್ರಮ ನಡೆಸಿಕೊಡಲಿದೆ. ವಿವಿಧ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳೂ ಪ್ರದರ್ಶನಗೊಳ್ಳಲಿವೆ ಎಂದರು. ಸಂಸದ ಡಿ.ಕೆ.ಸುರೇಶ್ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸುವರು. ಸಮಿತಿ ಗೌರವಾಧ್ಯಕ್ಷ ಸಿ.ಎನ್ .ಆರ್.ವೆಂಕಟೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಲಿಂಗಪ್ಪ, ಎಸ್.ರವಿ, ಮಾಜಿ ಶಾಸಕ ಕೆ.ರಾಜು, ಮಾಜಿ ಸಚಿವ ಪಿಜಿಆರ್ ಸಿಂಧ್ಯಾ, ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಸಮಾರಂಭದಲ್ಲಿ ರಾ – ಚ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಸಿ.ಎನ್.ಆರ್.ವೆಂಕಟೇಶ್, ಸಮಾಜ ಸೇವಕ ಉಮಾಶಂಕರ್, ನಿವೃತ್ತ ಔಷಧ ನಿಯಂತ್ರಣಾಧಿಕಾರಿ ಎಚ್ . ಶ್ರೀನಿವಾಸ್, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಕನ್ನಡ ಸಮದ್ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಮಾಜಿ ಶಾಸಕ ಕೆ.ರಾಜು, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಚಾಮುಂಡೇಶ್ವರಿ ಯುವ ಸೇವಾ ಸಮಿತಿ ಅಧ್ಯಕ್ಷ ಎಚ್ .ನರಸಿಂಹಯ್ಯ, ಕಾಂಗ್ರೆಸ್ ಮುಖಂಡರಾದ ಕಾಶಿಫ್, ಗುರುವೇಗೌಡ, ಅನಿಲ್ ಜೋಗಿಂದರ್ ಇದ್ದರು.