ಸಂತಪೂರ ಗ್ರಾಮ ಪಂಚಾಯತ್ ಅಧ್ಯಕ್ಷರ ಆಯ್ಕೆ

ಔರಾದ :ಆ.2: ತಾಲೂಕಿನ ಸಂತಪೂರ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಬುಧವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಹಾದೇವಿ ವಿಜಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಸುಮಿತ್ರಾಬಾಯಿ ಮಾರುತಿ ಅವರು ಆಯ್ಕೆಯಾಗಿದ್ದಾರೆ.

ಒಟ್ಟು 21 ಸದಸ್ಯ ಬಲ ಹೊಂದಿದ ಸಂತಪೂರ ಗ್ರಾಮ ಪಂಚಾಯಿತಿಯಲ್ಲಿ ಮಹಾದೇವಿ ವಿಜಯಕುಮಾರ ಅವರು 12 ಮತಗಳನ್ನು ಪಡೆದು ಆಯ್ಕೆಯಾಗಿರುತ್ತಾರೆ ಎಂದು ಚುನಾವಣಾ ಅಧಿಕಾರಿ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಬಿರೇಂದ್ರಸಿಂಗ ಠಾಕೂರ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ನೂತನ ಗ್ರಾಪಂ ಅಧ್ಯಕ್ಷೆಯಾಗಿ ಆಯ್ಕೆಯಾದ ಮಹಾದೇವಿ ವಿಜಯಕುಮಾರ್ ಅವರು ಮಾತನಾಡಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಸ್ವಚ್ಛತೆ, ಸರ್ಕಾರದಿಂದ ಸಾರ್ವಜನಿಕರಿಗೆ ಸಿಗಬೇಕಾದ ಸೌಲಭ್ಯಗಳು ಜನರಿಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು, ಎಲ್ಲಾ ಸದಸ್ಯರ ಸಹಕಾರ, ಶಾಸಕರ ಸಹಕಾರದಿಂದ ಅಭಿವೃದ್ಧಿ ಕಡೆ ಹೆಚ್ಚಿನ ಗಮನ ಹರಿಸುತ್ತೇನೆ, ನನ್ನ ಅಧಿಕಾರದ ಅವಧಿಯಲ್ಲಿ ಯಾವುದೇ ಲೋಪದೋಷಗಳು ಬರದ ಹಾಗೆ ಸಾರ್ವಜನಿಕರ ಪರಕೆಲಸಗಳನ್ನು ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ ಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಇನ್ನಿತರರಿದ್ದರು.