ಸಂತ್ರಸ್ತ ಪ್ರದೇಶಗಳಲ್ಲಿ ಮೂಲ ಸೌಕರ್‍ಯ ಕಲ್ಪಿಸಲು ಶಾ ಸೂಚನೆ

ನವದೆಹಲಿ,ಜೂ.೧೪- ವಿದ್ಯುತ್, ದೂರಸಂಪರ್ಕ, ಆರೋಗ್ಯ ಮತ್ತು ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಸೇವೆಗಳನ್ನು ಬಿಪರ್‌ಜಾಯ್ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ಖಚಿತಪಡಿಸಿಕೊಳ್ಳುವಂತೆ ಗುಜರಾತ್ ಸರ್ಕಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಎರಡು ದಿನಗಳ ಮೊದಲು ಪ್ರಬಲ ಚಂಡಮಾರುತ ಬಿಪರ್‌ಜಾಯ್ ಗುಜರಾತ್‌ನ ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಭೂಕುಸಿತದಿಂದ ಸಾಕಷ್ಟು ಹಾನಿಯಾಗಿರುವ ಹಿನ್ನೆಲೆಯಲ್ಲಿ ಆ ಪ್ರದೇಶಗಳಲ್ಲಿ ಸೌಲಭ್ಯ ಒದಗಿಸುವಂತೆ ನಿರ್ದೇಶಿಸಿದ್ದಾರೆ.
ಬಿಪರ್‌ಜಾಯ್ ಚಂಡಮಾರುತದ ಹಾನಿ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳೊಂದಿದೆ ಸಭೆ ನಡೆಸಿದ ಅವರು ಚಂಡಮಾರತ ಪೀಡಿತ ಪ್ರದೇಶದಲ್ಲಿ ಹೆಚ್ಚುವರಿಯಾಗಿ ಎನ್‌ಡಿಆರೆಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸುವಂತ ಸೂಚಿಸಿರುವ ಅವರು ಸ್ಥಳಾಂತರ ಮಾಡಿದ ಜನರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವಂತೆಯೂ ಸೂಚಿಸಿದ್ದಾರೆ.
ಇದರ ಜೊತೆಗೆ ನಾಗರಿಕ ಆಡಳಿತ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಜಂಟಿಯಾಗಿ ಸೇನಾ ಅಧಿಕಾರಿಗಳೊಂದಿಗೆ ಪರಿಹಾರ ಕಾರ್ಯಾಚರಣೆಗೆ ನಿಯೋಜಿಸಲು ಸೂಚಿಸಿದ್ಧಾರೆ.
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಇಬ್ಬರು ಕೇಂದ್ರ ಸಚಿವರು, ಗುಜರಾತ್‌ನ ಹಲವಾರು ಸಚಿವರು ಮತ್ತು ಸಂಸದರು, ಶಾಸಕರು ಮತ್ತು ಚಂಡಮಾರುತದಿಂದ ಪ್ರಭಾವಿತವಾಗಿರುವ ಎಂಟು ಜಿಲ್ಲೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಬಿಪರ್‌ಜಾಯ್ ಚಂಡಮಾರುತ ಹಿನ್ನೆಲೆಯಲ್ಲಿ ಕರಾವಳಿಯ ಸಮೀಪ ವಾಸಿಸುತ್ತಿರುವ ಮಂದಿಯನ್ನು ಸ್ಥಳಾಂತರ ಮಾಡಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ನೀಡಲಾಗಿದೆ.
ಚಂಡಮಾರುತದಿಂದ ಭೂಕುಸಿತವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರಾವಳಿ ತೀರ ಪ್ರದೇದ ವಿವಿಧ ಜಿಲ್ಲಾಡಳಿತಗಳು ಜನರನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿವೆ” ಎಂದು ರಾಜ್ಯ ಪರಿಹಾರ ಆಯುಕ್ತ ಅಲೋಕ್ ಕುಮಾರ್ ಪಾಂಡೆ ಹೇಳಿದ್ದಾರೆ.
ಕರಾವಳಿಯ ೧೦ ಕಿಮೀ ವ್ಯಾಪ್ತಿಯಲ್ಲಿರುವ ವ್ಯಕ್ತಿಗಳನ್ನು ಖಾಲಿ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ, ಇದುವರೆಗೆ ಚಂಡಮಾರುತದಿಂದ ಒರ್ವ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.