ಸಂಪತ್ತಿಗಿಂತ ಆರೋಗ್ಯ ಮುಖ್ಯ: ಡಾ. ಚೈತ್ರಾ ಓಂಕಾರ

ಕಲಬುರಗಿ:ಏ.04:ಸಂಪತ್ತಿಗಿಂತ ಆರೋಗ್ಯ ಮುಖ್ಯ ಎಂದು ಡಾ. ಮಲಕ್ಕರೆಡ್ಡಿ ಹೋಮಿಯೋಪತಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಚೈತ್ರಾ ಓಂಕಾರ ನುಡಿದರು.
ನಗರದ ಕೆಪಿಇ ಸಂಸ್ಥೆಯ ಡಾ. ಅಂಬೇಡ್ಕರ್ ಪದವಿ ಮಹಾವಿದ್ಯಾಲಯ ಕಲಬುರಗಿ ಮತ್ತು ಡಾ. ಮಲಕ್ಕರೆಡ್ಡಿ ಹೋಮಿಯೋಪತಿ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಕಲ್ಬುರ್ಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಾ. ಅಂಬೇಡ್ಕರ್ ಪದವಿ ಮಹಾವಿದ್ಯಾಲಯದಲ್ಲಿ ಆರೋಗ್ಯ ಮೇಳ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನುಡಿದರು.
ಭಾರತದಲ್ಲಿ ಅನಾಧಿಕಾಲದಿಂದಲೂ ಆಯುರ್ವೇದಿಕ ಪದ್ಧತಿ ಅಸ್ತಿತ್ವದಲ್ಲಿದೆ. ವೈದ್ಯರು ಶಸ್ತ್ರ ಚಿಕಿತ್ಸೆಯಿಂದ ಪ್ರಕೃತಿಯ ಸರ್ವ ರೋಗಗಳಿಗೂ ಮದ್ದು ಕಂಡುಹಿಡಿದಿದ್ದಾರೆ.
ಇಂದಿನ ಯಾಂತ್ರಿಕ ಜೀವನದಲ್ಲಿ ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕಾಗಿದೆ ಏಕೆಂದರೆ ನಾವು ತಿನ್ನುವ ಆಹಾರ ಕುಡಿಯುವ ನೀರು ಪರಿಶುದ್ಧವಾಗಿರಬೇಕು ನಮ್ಮ ಆರೋಗ್ಯವೇ ನಮ್ಮ ಭಾಗ್ಯ ಅದಕ್ಕಾಗಿ ಇಂದಿನ ಯುವಕರಿಗೆ ಆರೋಗ್ಯದ ಜಾಗೃತಿ ತುಂಬಾ ಅವಶ್ಯಕವಾಗಿದೆ ಇಂಥ ಮೇಳಗಳು ಕಾಲೇಜಿನಲ್ಲಿ ಜರುಗುತ್ತಿರುವುದರಿಂದ ಎಲ್ಲ ವಿದ್ಯಾರ್ಥಿಗಳು ಆರೋಗ್ಯದ ಕಡೆ ಹೆಚ್ಚು ಗಮನ ಕೊಡುವುದಕ್ಕೆ ಸಾಧ್ಯವಾಗುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ. ವಿಜಯಕುಮಾರ .ಡಿ ಅವರು ಮಾತನಾಡುತ್ತಾ ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ ನಾವು ಒಳ್ಳೆಯ ಆರೋಗ್ಯವಾಗಿರಬೇಕಾಗಿದ್ದರೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಬೇಕು ಪ್ರತಿದಿನ ವ್ಯಾಯಾಮವನ್ನು ಮಾಡುವುದರ ಮೂಲಕ ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಇರುತ್ತದೆ. ಆರೋಗ್ಯ ಒಳ್ಳೆಯ ರೀತಿಯಿಂದ ಕಾಪಾಡಿಕೊಳ್ಳೋಣ ಎಂದರು. ಕಾರ್ಯಕ್ರಮದಲ್ಲಿ ಆರೋಗ್ಯ ಅಧಿಕಾರಿಗಳಾದ ಡಾ.ಸಿದ್ದಲಿಂಗ ಮಾಲಿಪಾಟೀಲ ಎನ್ಎಸ್ಎಸ್ ಅಧಿಕಾರಿಗಳಾದ ಸಿದ್ದಪ್ಪ ಎಂ ಕಾಂತ ಉಪಸ್ಥಿಪರಿದ್ದರು.
ಇದೆ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರಿಗೆ ಆರೋಗ್ಯ ತಪಾಸಣೆ ಕೈಗೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಬಂದಿರುವ ಎಲ್ಲಾ ಅತಿಥಿಗಳಿಗೆ ಡಾ. ಗಾಂಧೀಜಿ ಮೋಳಕೆರೆಯವರು ಸ್ವಾಗತಿಸಿದ್ದರು.ರಾಜ್ಯಶಾಸ್ತ್ರದ ಉಪನ್ಯಾಸಕರಾದ ಹರ್ಷವರ್ಧನ. ಬಿ ನಿರೂಪಿಸಿದ್ದರು ಐಕ್ಯೂ ಎಸಿ ಸಂಯೋಜಕರಾದ ಡಾ. ನಿರ್ಮಲಾ ಸಿರಗಾಪುರ ವಂದಿಸಿದ್ದರು.